ಮಡಿಕೇರಿ, ಸೆ. ೧: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗು ವಂತಹ ಬಾಕಿ ಪ್ರಕರಣವನ್ನು ಮಧ್ಯಸ್ಥಿಕೆ ಗಾರಿಕೆಯ ಮೂಲಕ ಇತ್ಯರ್ಥಪಡಿಸಲು ದೇಶದಾದ್ಯಂತ ಡಿಸೆಂಬರ್ ೩೦ ರವರೆಗೆ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾ£ಕ್ಕೆ ಚಾಲನೆ ನೀಡಲಾಗಿದೆ.
ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿ ಇರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ.