ಸೋಮವಾರಪೇಟೆ, ಸೆ. ೧: ರಾಜ್ಯಾದಂತ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್” (ಗಿಃ-ಉ ಖಂಒ ಉ) ಯೋಜನೆ ಜುಲೈ ೧ ರಿಂದ ಪ್ರಾರಂಭವಾಗಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್ ಯೋಜನೆ ಜನರಿಗೆ ೧೨೫ ದಿನಗಳ ಕೂಲಿ ಖಾತ್ರಿಯ ಉದ್ಯೋಗ ಒದಗಿಸುವುದರ ಜೊತೆಗೆ ಪ್ರತಿ ದಿನದ ಕೂಲಿಯ ಮೊತ್ತವನ್ನ ೩೮೨/-ರೂ. ಗೆ ಹೆಚ್ಚಿಸಿದೆ. ಜನರ ಜೀವನ ಮಟ್ಟವನ್ನು ಉತ್ತಮ ಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಯೋಜನೆಯಡಿ ಹೆಚ್ಚು ಅರ್ಹ ಕುಟುಂಬಗಳನ್ನು ಸೇರ್ಪಡೆಗೊಳಿಸಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಹೆಚ್ಚಿನ ಅವಕಾಶಗಳಿದೆ.
ವೈಯುಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕೋಳಿಗೂಡು, ಮೇಕೆ ಶೆಡ್, ಹಂದಿ ಶೆಡ್, ಇಂಗು ಗುಂಡಿ, ತೆರೆದ ಬಾವಿ, ಕೃಷಿ ಹೊಂಡ, ಅಡಿಕೆ, ಕಾಫಿ, ಕಾಳುಮೆಣಸು, ಸೇರಿದಂತೆ ವೈಯುಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಒಳಗೊಂಡAತೆ ಗಿಃ-ಉ ಖಂಒ ಉ ಯೋಜನೆಯಲ್ಲಿ ಒಟ್ಟು ೩೧೮ ವಿವಿಧ ಬಗೆಯ ಕಾಮಗಾರಿಗಳಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ತಾಲೂಕಿನಾದ್ಯಂತ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೆ. ೧೫ ರವರೆಗೆ ಜಾಬ್ ಕಾರ್ಡ್ ಮೇಳ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು. ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜಾಬ್ ಕಾರ್ಡ್ ಪಡೆಯಬೇಕೆಂದು ಮನವಿ ಮಾಡಿದ್ದಾರೆ.
ಕುಟುಂಬದ ಎ.ಪಿ.ಎಲ್. ಅಥವಾ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಎರಡು ಪಾಸ್ ಪೋಸ್ಟ್ ಅಳತೆಯ ಭಾವಚಿತ್ರಗಳನ್ನು ಗ್ರಾ.ಪಂಗೆ ನೀಡಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕೆಂದು ಪರಮೇಶ್‌ಕುಮಾರ್ ಮನವಿ ಮಾಡಿದ್ದಾರೆ.