ಕುಶಾಲನಗರ, ಸೆ. ೧: ಕುಶಾಲನಗರ ಸಮೀಪ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಆನಂದ ನಗರ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಸಂತೋಷ್ (೧೯) ಮೃತಪಟ್ಟ ದುರ್ದೈವಿ.
ಬೈಲುಕುಪ್ಪೆ ಪೊಲೀಸರು ಬಸ್ ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.