ಕುಶಾಲನಗರ, ಸೆ. ೧: ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಆಗಿದ್ದ ಕುಶಾಲನಗರ ನೇತಾಜಿ ಬಡಾವಣೆ ನಿವಾಸಿ ಅಮೆಮನೆ ಕಮಲ ಗಣಪತಿ (೭೯) ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಕುಶಾಲನಗರದ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.