ಮೂರ್ನಾಡು, ಸೆ. ೧: ಇಲ್ಲಿನ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೨ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟ ಕಾರ್ಯಕ್ರಮ ತಾ. ೩ ರಂದು ನಡೆಯಲಿದೆ. ಅಪರಾಹ್ನ ೧.೩೦ ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟವನ್ನು ಕೋಡಂಬೂರು ಕಾಫಿ ಬೆಳೆಗಾರ ಬಡುವಂಡ ಬಿ. ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಸಾರ್ವಜನಿಕರಿಗೆ ತೆಂಗಿನಕಾಯಿಗೆ ಗುಂಡುಹೊಡೆಯುವುದು, ಪುರುಷರಿಗೆ ಮಹಿಳೆಯರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ವಿವಿಧ ಓಟದ ಸ್ಪರ್ಧೆಗಳು, ಬಾಂಬ್ ಇನ್ ದಿ ಸಿಟಿ, ಭಾರದ ಕಲ್ಲು ಎಸೆತ, ನಿಂಬೆಹಣ್ಣು ಚಮಚ ಓಟ, ವಾದ್ಯದ ಕುಣಿತ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ ೫.೩೦ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕ್ಲಬ್‌ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಲಿದ್ದಾರೆ.