ಮಡಿಕೇರಿ, ಸೆ. ೧: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಘಟಕÀದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಶಿಕಾರಿಪುರದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಮಾರಕಾಸ್ತçಗಳಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ವಾಹನಗಳಿಗೆ ಹಾನಿ ಮಾಡಲಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭ ವಿಶ್ವ ಹಿಂದೂ ಪರಿಷತ್-ಬಜರಂಗದಳದ ಜಿಲ್ಲಾ ಸಹ ಸಂಯೋಜಕ ದುರ್ಗೇಶ್ ಭಜರಂಗಿ, ತಾಲೂಕು ಸಹ ಸಂಯೋಜಕ ಮುಕುಂದ್, ತಾಲೂಕು ಗೋ ರಕ್ಷಾ ಪ್ರಮುಖ್ ರಾಜೇಶ್ ಮಣಿ, ನಗರ ಸಹ ಸಂಯೋಜಕ ಅಜಿತ್ ಶೆಟ್ಟಿ ಸೇರಿದಂತೆ ಬಜರಂಗದಳದ ಕಾರ್ಯಕರ್ತರಾದ ಮಣಿ, ಕೇಶವ, ರಂಜಿತ್, ವಿನೋದ್, ಗಣೇಶ್ ಹಾಗೂ ಹರ್ಷಿತ್ ಹಾಜರಿದ್ದರು.