ವೀರಾಜಪೇಟೆ, ಸೆ. ೧: ವೀರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿರುವ ಸುನಂದ ಎ.ಪಿ. ಅವರಿಗೆ ಗ್ರಾಮೀಣ ಕೈಗಾರಿಕಾ ಇಲಾಖೆ ವತಿಯಿಂದ ಟೈಲರಿಂಗ್ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಯಂತ್ರೋಪಕರಣಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಪಕ್ಷದ ಪ್ರಮುಖರಾದ ಪಟ್ಟಡ ದೀಪಕ್, ಸಂತೋಷ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.