ಕೂಡಿಗೆ, ಸೆ. ೧: ಹಾರಂಗಿ ಅಣೆಕಟ್ಟೆಯ ಸಮೀಪದಲ್ಲಿರುವ ಸಾಕಾನೆ ಶಿಬಿರಕ್ಕೆ ಜಿಲ್ಲಾ ಅರಣ್ಯ ಇಲಾಖೆಯ ಸಿಸಿ.ಎಫ್ ಸೋನಲ್ ವೃಷ್ಣಿ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಬೃಹತ್ ಕಬ್ಬಿಣ ರಾಡ್‌ಗಳ ಅಳವಡಿಕೆ ಮತ್ತು ಪ್ರವಾಸಿಗರು ಸಾಕಾನೆಗಳ ವೀಕ್ಷಣೆಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.
ಸಾಕಾನೆ ಶಿಬಿರದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿತ್ತು. ರಾಜ್ಯ ಸರ್ಕಾರ ಆದೇಶದ ಅನ್ವಯ ಮುಂದಿನ ದಿನಗಳಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸುವ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಡಿ.ಎಫ್.ಓ. ಅಭಿಷೇಕ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್, ವಿವಿಧ ಉಪವಲಯ ಅರಣ್ಯಾಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.