ಸಿದ್ದಾಪುರ, ಸೆ. ೨: ಸಿದ್ದಾಪುರದ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಆಚರಣೆ ಅಂಗವಾಗಿ ಸಿದ್ದಾಪುರದ ಪ್ರಮುಖ ಬೀದಿಗಳಲ್ಲಿ ಈದ್ ಮಿಲಾದ್ ಸಂದೇಶ ಜಾಥಾ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮಕ್ಕಳಿಂದ ದಪ್ ಪ್ರದರ್ಶನವಾಯಿತು. ಬಳಿಕ ಮಸೀದಿಯಲ್ಲಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಸೀದಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.