ಮಡಿಕೇರಿ ಸೆ. ೨: ಕೊಡಗು ವಿದ್ಯಾಲಯದ ೧೦ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಹಾಗೂ ಆಡಳಿತ ಮುಖ್ಯಸ್ಥ ರವಿ ಪಿ. ಉದ್ಘಾಟಿಸಿದರು.
ರಕ್ಷಾ ಬಂಧನದ ಅಂಗವಾಗಿ ೧೦ನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ಸಹೋದರ-ಸಹೋದರಿಯರ ನಡುವಿನ ಬಾಂಧವ್ಯವನ್ನು ಬಿಂಬಿಸುವ ನಾಟಕವನ್ನು ಪ್ರಸ್ತುತಪಡಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಕ್ಷಾ ಬಂಧನದ ಮಹತ್ವ, ಕುಟುಂಬ ಸಂಬAಧಗಳ ಮೌಲ್ಯ ಮತ್ತು ಪರಸ್ಪರ ಪ್ರೀತಿ-ಗೌರವದ ಸಂದೇಶವನ್ನು ಸುಂದರವಾಗಿ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ೮ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆರು ಗುಂಪುಗಳಾಗಿ ವಿಭಜಿಸಿಕೊಂಡು ಮಡಿಕೇರಿ ನಗರದ ಕೊಡಗು ವಿದ್ಯಾಲಯ ಆಪರ್ಚುನಿಟಿ ಶಾಲೆ ಮತ್ತು ಶಕ್ತಿ ವೃದ್ಧಾಶ್ರಮ, ಸಿ.ಎಂ.ಸಿ. ಹಾಗೂ ಜನತಾ ಬಜಾರ್, ಪೊಲೀಸ್ ಠಾಣೆ, ಹಾಪ್‌ಕಾಮ್ಸ್ ಮತ್ತು ಅಂಚೆ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಹಾಗೂ ಯೂನಿಯನ್ ಬ್ಯಾಂಕ್ ಮತ್ತು ಕಾಲೇಜು ರಸ್ತೆ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ರಾಖಿ ಕಟ್ಟಿದರು.