ದುಗ್ಗಳ ಸದಾನಂದ
ನಾಪೋಕ್ಲು, ಸೆ. ೨: ಕೊಡಗು ಜಿಲ್ಲೆಯಲ್ಲಿ ಈ ಮೊದಲು ಸುರಿದ ಭಾರಿ ಮಳೆಯಿಂದಾಗಿ ಕುಂದಚೇರಿ ಗ್ರಾಮದ ವ್ಯಾಪ್ತಿಯಲ್ಲಿ ಬೆಟ್ಟ ಕುಸಿತ ಸಂಭವಿಸಿ ಆತಂಕಕ್ಕೆ ಕಾರಣವಾಗಿದೆ.
ಇದರಿಂದಾಗಿ ಬೆಟ್ಟದ ಕೆಳಭಾಗದ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕುಂದಚೇರಿ ಗ್ರಾಮದ ಪೂವಲಮಾನಿ ಎಸ್‌ಇ ಕಾಲೋನಿಯಲ್ಲಿ ಸುಮಾರು ೧೫ ಕುಟುಂಬಗಳು ವಾಸವಾಗಿದ್ದು ಮೇಲ್ಭಾಗದಲ್ಲಿ ಮಣ್ಣು ಹಾಗೂ ಸಣ್ಣ ಪ್ರಮಾಣದ ಕಲ್ಲುಗಳು ಕುಸಿತ ಸಂಭವಿಸಿದೆ. ಇದು ಬೆಟ್ಟದ ಕೆಳಭಾಗದಲ್ಲಿ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಾಹಿತಿ ತಿಳಿದ ಗ್ರಾಮ ಪಂಚಾಯಿತಿ, ಕಂದಾಯ, ಅರಣ್ಯ ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಟ್ಟದ ಮಣ್ಣು ಕುಸಿಯುವ ಸಾಧ್ಯತೆ ಬಗ್ಗೆ ಸ್ಥಳಿಯ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ .
ಈ ವ್ಯಾಪ್ತಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುಂಜಾಗತಾ ಕ್ರಮವಾಗಿ ಬೆಟ್ಟದ ಕೆಳಭಾಗದಲ್ಲಿ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ವಾಸವಾಗಿದ್ದ ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭ ಕಂದಾಯ ಪರಿವೀಕ್ಷಕ ಶಿವಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಗ್ರಾಮ ಲೆಕ್ಕಿಗ ಜನಾಧÀðನ, ಎನ್‌ಡಿಆರ್‌ಎಫ್, ಅರಣ್ಯ ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಪೂವಲಮಾನಿ ಎಸ್‌ಇ ಕಾಲೋನಿ ಮೇಲ್ಭಾಗದ ಬೆಟ್ಟದಲ್ಲಿ ಮಣ್ಣು ಹಾಗೂ ಬಂಡೆಕಲ್ಲು ಕುಸಿದಿರುವುದರಿಂದ ಹೆಚ್ಚಿನ ಅಪಾಯವನ್ನು ತಡೆಗಟ್ಟಲು ತಂತಿ ಬೇಲಿ ನಿರ್ಮಿಸಿ ಬಂಡೆಗಳು ಉರುಳದಂತೆ ಮುಂಜಾಗ್ರತಾ ಕ್ರಮ ಕೈಗೊಂಡು ತೀವ್ರ ನಿಗಾವಹಿಸಲಾಗಿದೆ. ತೀರಾ ಅಪಾಯದಲ್ಲಿರುವ ಎರಡು ಮನೆಯ ಕುಟುಂಬಗಳನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಕೃತಿಕ ವಿಕೋಪ ನಿರ್ವಹಣಾಧಿಕಾರಿ ಅನನ್ಯ ವಾಸುದೇವ್, ಎನ್‌ಡಿಆರ್‌ಎಫ್ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.