ಮಡಿಕೇರಿ, ಸೆ. ೨: ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ ಗಂಟೆಯ ತನಕ ಡಿಜೆ ಅಥವಾ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿದ್ದು, ನಿಯಮ ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಮುಂಬರುವ ಯಾವುದೇ ಸಾರ್ವಜನಿಕ ಆಚರಣೆ ಸಂದರ್ಭ ಜನರ ಸುರಕ್ಷತೆಗೆ ಆದ್ಯತೆ ನೀಡಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುಪ್ರೀಂ ಕೋರ್ಟ್ ಆದೇಶ, ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬAಧಿಸಿದ ಸುತ್ತೋಲೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಿಯಮ ಉಲ್ಲಂಘನೆಯಾದಲ್ಲಿ ಪರಿಸರ ಸಂರಕ್ಷಣಾ ಕಾಯ್ದೆ ೧೯೮೬, ಸೆಕ್ಷನ್ ೧೫ರಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಇದರಡಿ ೫ ವರ್ಷಗಳ ಕಠಿಣ ಜೈಲು ಶಿಕ್ಷೆ, ಒಂದು ಲಕ್ಷ ರೂಪಾಯಿ ತನಕ ದಂಡ, ತಪ್ಪು ಸಾಬೀತಾದರೆ ಜೈಲು ಶಿಕ್ಷೆ, ದಂಡ, ಸ್ಥಳದಲ್ಲಿ ಡಿಜೆ ಸೆಟ್‌ಗಳು, ಸ್ಪೀಕರ್ ಹಾಗೂ ವಾಹನವನ್ನು ಜಪ್ತಿ ಮಾಡಲಾಗುವುದು. ಒಮ್ಮೆ ಪ್ರಕರಣ ದಾಖಲಾದ ನಂತರವೂ ನಿಯಮ ಉಲ್ಲಂಘನೆ ಮುಂದುವರಿದರೆ ಪ್ರತಿದಿನಕ್ಕೆ ರೂ. ೫ ಸಾವಿರ ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಬಿಂದುಮಣಿ ಎಚ್ಚರಿಕೆ ನೀಡಿದ್ದಾರೆ.