ಮುಳ್ಳೂರು, ಸೆ ೨: ಪ್ರಾಥಮಿಕ ಶಾಲಾ ಹಂತದಲ್ಲಿ ಶಿಕ್ಷಣ ಇಲಾಖೆಯು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್. ಸುಬ್ಬಯ್ಯ ಅಭಿಪ್ರಾಯಪಟ್ಟರು.
ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ೨೦೨೬-೨೭ನೇ ಸಾಲಿನ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಸಲಹೆ ನೀಡಿದರು.
ಶನಿವಾರಸಂತೆ ಕ್ಲಸ್ಟರ್ ಸಿಆರ್ಪಿ ಸಿ.ಕೆ. ದಿನೇಶ್ ಮಾತನಾಡಿ, ಕೊಡಗು ಕ್ರೀಡೆಗೆ ಹೆಸರುವಾಸಿಯಾಗಿದ್ದು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದ ಕ್ರೀಡಾಪಟುಗಳಾಗಿ ಜಿಲ್ಲೆಗೆ ಕೀರ್ತಿ ತಂದುಕೊಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಶನಿವಾರಸAತೆ ಸೆಕ್ರೆಡ್ ಹಾರ್ಟ್ ಶಾಲೆಯ ಪ್ರಾಂಶುಪಾಲ ಥೋಮಸ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸೌಮ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಉಪಾಧ್ಯಕ್ಷೆ ಪಲ್ಲವಿ, ನಿವೃತ್ತ ಸೈನಿಕ ಯಶ್ವಂತ್, ಮಾಜಿ ಗ್ರಾ.ಪಂ.ಸದಸ್ಯ ತಸ್ಲಿಮ್, ಹಂಡ್ಲಿ ಕ್ಲಸ್ಟರ್ ಸಿಆರ್ಪಿ ಗಿರೀಶ್, ಗೌಡಳ್ಳಿ ಸಿಆರ್ಪಿ ದೇವರಾಜ್ ಗೌಡ ವಿವಿಧ ಶಾಲಾ ಮತ್ತು ವಿದ್ಯಾಸಂಸ್ಥೆ ಮುಖ್ಯಸ್ಥರಾದ ಡಿ. ಸುಜಲಾದೇವಿ, ಷಣ್ಮುಖಯ್ಯ, ಅಶ್ವಥ್, ಲಲಿತಾ, ಗೋಪಾಲಪುರ ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಮ್ಮ, ಕ್ರೀಡಾಕೂಟ ಕಾರ್ಯದರ್ಶಿ ಕವಿತ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್, ಭಾಸ್ಕರ್, ಪವಿತ್ರ, ಮಂಜುಳ, ಸುರೇಶ್ ಮುಂತಾದವರು ಹಾಜರಿದ್ದರು. ಈ ಸಂದರ್ಭ ಕ್ರೀಡಾ ಕಾರ್ಯದರ್ಶಿ ಕವಿತ ಹಿರಿಯ ಶಿಕ್ಷಕಿ ಯಶೋಧ ಗಣೇಶ್ ಇವರನ್ನು ಸನ್ಮಾನಿಸಲಾಯಿತು.