ಮಡಿಕೇರಿ, ಸೆ.೨: ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿ ಗಳು ಮೂರ್ನಾಡು ಕೆ.ಪಿ.ಎಸ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಾಧನೆ ಗೈದಿದ್ದಾರೆ. ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರಾಥಮಿಕ ಶಾಲಾ ಬಾಲಕರು ಹಾಗೂ ಬಾಲಕಿಯರು ಕೂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ತರಬೇತಿ ನೀಡಿದ್ದಾರೆ.