ಮಡಿಕೇರಿ, ಸೆ. ೪: ಕೊಡಗು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ನಗರದ ಕ್ರಿಸ್ಟಲ್ ಕೋರ್ಟ್ ಹೊಟೇಲ್ ಸಭಾಂಗಣದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.
ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ವಿವಿಧ ಸಂಘ-ಸAಸ್ಥೆಗಳ ಪ್ರಮುಖರು, ರೈತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೊಡಗು ಜಿಲ್ಲೆಯ ಮೇಲೆ ಉಂಟಾಗಬಹುದಾದ ಪರಿಣಾಮಗಳು ಹಾಗೂ ಜನರು ಎದುರಿಸಬೇಕಾಗಬಹುದಾದ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಕಸ್ತೂರಿ ರಂಗನ್ ವರದಿಯಿಂದ ಬಾಧಿತವಾಗಲಿರುವ ಜಿಲ್ಲೆಯ ೫೩ ಪ್ರದೇಶಗಳಲ್ಲೂ ಗ್ರಾಮಸಭೆಗಳನ್ನು ನಡೆಸಿ, ಸ್ಥಳೀಯರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ದಾಖಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಬಳಿಕ ಗ್ರಾಮಸಭೆಗಳಲ್ಲಿ ಸಂಗ್ರಹವಾಗುವ ಆಕ್ಷೇಪಣೆಗಳನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಿ, ವರದಿ ಜಾರಿಯಿಂದ ಕೊಡಗಿನ ಜನರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆಯಲು ನಿರ್ಧರಿಸಲಾಯಿತು.
ಪಕ್ಷಾತೀತ ಹೋರಾಟ : ಪೊನ್ನಣ್ಣ
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ೨೦೧೪ರಿಂದ ಈವರೆಗೆ ಏಳು ಕರಡು ಅಧಿಸೂಚನೆಗಳು ಪ್ರಕಟಗೊಂಡಿವೆ. ಮಾಧವ ಗಾಡ್ಗೀಳ್ ವರದಿಯಂತೆ ಕಸ್ತೂರಿ ರಂಗನ್ ವರದಿಯನ್ನೂ ತಿರಸ್ಕರಿಸಬೇಕೆಂಬ ಬೇಡಿಕೆ ಮೊದಲಿನಿಂದಲೂ ಇದೆ. ಕಳೆದ ಮೂರು ಕರಡು ಅಧಿಸೂಚನೆಗಳಲ್ಲೂ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಬಹುತೇಕ ಒಂದೇ ರೀತಿಯ ಅಂಶಗಳಿವೆ ಎಂದು ಹೇಳಿದರು.
ಪರಿಸರ ಸಂರಕ್ಷಣೆಗೆ ಯಾರ ಆಕ್ಷೇಪವೂ ಇಲ್ಲ. ಆದರೆ, ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಹ ವರದಿಗಳಿಗೆ ನಮ್ಮ ವಿರೋಧವಿದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮುಂದಿನ ದಿನಗಳಲ್ಲಿ ಬಂದೂಕು ವಿನಾಯಿತಿ ಪರವಾನಗಿ ಪಡೆಯಲೂ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕವಿದೆ ಎಂದು ಹೇಳಿದರು.
ಗ್ರಾಮಮಟ್ಟದಲ್ಲಿ ಸಭೆಗಳನ್ನು ನಡೆಸಿ ಜನರ ಆಕ್ಷೇಪಣೆಗಳನ್ನು ಸಂಗ್ರಹಿಸುವುದರ ಜತೆಗೆ, ನಿಯೋಗವೊಂದನ್ನು ಅರಣ್ಯ ಸಚಿವರನ್ನು ಭೇಟಿಯಾಗಿಸಿ ಈ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲಾಗುವುದು. ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜಕೀಯ ಭೇದ ಮರೆತು ಪಕ್ಷಾತೀತವಾಗಿ ಹೋರಾಟ ನಡೆಸೋಣ ಎಂದು ಎ.ಎಸ್. ಪೊನ್ನಣ್ಣ ಕರೆ ನೀಡಿದರು.
ಅಧಿವೇಶನದಲ್ಲೂ ಪ್ರಸ್ತಾಪ : ಮಂತರ್
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂಬ ನಿಲುವು ಹೊಂದಿದ್ದು, ಈ ಕುರಿತು ಸರಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುವುದು. ವರದಿಯಿಂದ ಬಾಧಿತವಾಗಲಿರುವ ೫೩ ಗ್ರಾಮಗಳ ವ್ಯಾಪ್ತಿಯಲ್ಲಿ ವಿಶೇಷ ಗ್ರಾಮಸಭೆಗಳನ್ನು ನಡೆಸಿ, ಸ್ಥಳೀಯರಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಗ್ರಾಮಸ್ಥರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಕ್ರೋಢೀಕರಿಸಿ ಸರಕಾರದ ಗಮನಕ್ಕೆ ತರಲಾಗುವುದು. ಸೆ. ೨೦, ೨೧ ಮತ್ತು ೨೨ರಂದು ನಡೆಯಲಿರುವ ವಿಧಾನಮಂಡಲ ವಿಶೇಷ ಅಧಿವೇಶನದಲ್ಲೂ ಕಸ್ತೂರಿ ರಂಗನ್ ವರದಿಯಿಂದ ಕೊಡಗು ಜಿಲ್ಲೆಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ, ಸರಕಾರದ ಗಮನ ಸೆಳೆಯಲಾಗುವುದು ಎಂದು ಡಾ. ಮಂತರ್ ಗೌಡ ತಿಳಿಸಿದರು.
ಭೌತಿಕ ಸರ್ವೆ ನಡೆಯಬೇಕು : ಬೋಪಯ್ಯ
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕಸ್ತೂರಿ ರಂಗನ್ ವರದಿಗೆ ಸಂಬAಧಿಸಿದAತೆ ಕೇರಳದಲ್ಲಿ ಭೌತಿಕ ಸರ್ವೆ ನಡೆಸಲಾಗಿದೆ. ಇದೇ ಮಾದರಿಯಲ್ಲಿ ಕೊಡಗಿನಲ್ಲೂ ಭೌತಿಕ ಸರ್ವೆ ನಡೆಸಿದರೆ ವರದಿಯ ವ್ಯಾಪ್ತಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೊಡಗಿನ ಶಾಸಕರು ಕಸ್ತೂರಿ ರಂಗನ್ ವರದಿಯ ವಿಚಾರವನ್ನು ಪ್ರಸ್ತಾಪಿಸಿ, ಜಿಲ್ಲೆಯ ಜನರ ಪರವಾಗಿ ಧ್ವನಿ ಮೊಳಗಿಸಬೇಕು. ವರದಿಯಿಂದ ಜಿಲ್ಲೆಯ ಜನರಿಗೆ ಯಾವುದೇ ತೊಂದರೆಯಾಗದAತೆ, ನೆಮ್ಮದಿಯ ಬದುಕು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಆಕ್ಷೇಪಣೆ ಸಿದ್ಧಪಡಿಸಲಾಗುವುದು : ರಂಜನ್
ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಸ್ತೂರಿ ರಂಗನ್ ವರದಿ ಕುರಿತು ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರನ್ನು ಭೇಟಿಯಾಗಿ ಜಿಲ್ಲೆಯ ಜನರ ಆತಂಕ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಕೆಲಸ ಮಾಡಲಾಗುವುದು. ಅದೇ ರೀತಿ ಸಿ ಮತ್ತು ಡಿ ಲ್ಯಾಂಡ್ ಹಾಗೂ ಸೆಕ್ಷನ್ ೪ರ ವಿಚಾರದಲ್ಲೂ ಸರಕಾರದ ಗಮನ ಸೆಳೆಯಬೇಕಾಗಿದೆ. ಅರಣ್ಯ ಇಲಾಖೆಯಿಂದ ಆಗಬಹುದಾದ ಸಮಸ್ಯೆಗಿಂತ ಪರಿಸರವಾದಿಗಳಿಂದ ಉಂಟಾಗಬಹುದಾದ ಸಮಸ್ಯೆಯೇ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಕಸ್ತೂರಿ ರಂಗನ್ ವರದಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಆಕ್ಷೇಪಣೆಗಳನ್ನು ಸಿದ್ಧಪಡಿಸಿ, ರಾಜ್ಯ ಹಾಗೂ ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು. ಈ ವಿಚಾರದಲ್ಲಿ ಜಿಲ್ಲೆಯ ಜನರು ಯಾರೂ ಭಯಪಡುವ ಅಗತ್ಯವಿಲ್ಲ. ಜನರ ಹಿತದೃಷ್ಟಿಯಿಂದ ಹೋರಾಟ ಮುಂದುವರಿಸಲಾಗುವುದು ಎಂದು ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿ, ಕೊಡಗು ಭೌಗೋಳಿಕವಾಗಿ ಭಿನ್ನವಾಗಿದೆ. ಈ ಹಿಂದಿನಿAದಲೂ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕಾರ ಮಾಡಿಕೊಂಡು ಬರಲಾಗುತ್ತಿದೆ. ಈಗಾಗಲೇ ನಿಯಂತ್ರಣಗಳಿವೆ. ಯಾವುದೇ ಅಧ್ಯಯನ ಇಲ್ಲದೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಗೆ ಸೀಮಿತವಾಗಿ ಬೇಕಾದ ಪರಿಸರ ರಕ್ಷಣಾ ಕ್ರಮಗಳನ್ನು ಅನುಷ್ಠಾನ ಮಾಡಬೇಕಾಗಿದೆ ಎಂದರು.
ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಹಾಜರಿದ್ದರು.