ಮಡಿಕೇರಿ, ಸೆ. ೪: ನಗರದ ಕಸದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಶಾಸಕ ಮಂತರ್‌ಗೌಡ ಮತ್ತು ನಗರ ಅಭಿವೃದ್ಧಿ ಕಾರ್ಯದರ್ಶಿ ಬಿ.ಬಿ ಕಾವೇರಿ ಅವರ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಮಡಿಕೇರಿ ನಗರದ ಕಸದ ಸಮಸ್ಯೆ ಪಾರಂಪರಿಕ ಕಸ ವಿಲೇವಾರಿ ಸಮಸ್ಯೆ ಹಾಗೂ ಯುಜಿಡಿ ಮತ್ತು ಅಮೃತ ೨ ಕುಡಿಯುವ ಕಾಮಗಾರಿಯ ಬಗ್ಗೆ ಚರ್ಚಿಸಿ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಸಂಬAಧಿಸಿದವರಿಗೆ ಸೂಚಿಸಲಾಯಿತು. ಈ ಸಭೆ ಯಲ್ಲಿ ನಗರಸಭಾ ಅಧ್ಯಕ್ಷರಾದ ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರಸಭಾ ಸದಸ್ಯರುಗಳು ಸೇರಿದಂತೆ ಆಯುಕ್ತರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.