ಮಡಿಕೇರಿ, ಸೆ. ೫ : ೧೯೬೫ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕöÈತ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ ೬೧ನೇ ಪುಣ್ಯಸ್ಮರಣೆ ಸೆ.೭ ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಗ್ಗೆ ೧೧ ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.