ಕೂಡಿಗೆ, ಸೆ. ೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿರುವ ಜೇನುಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ತಾ.೯ ರಂದು ಸಂಘದ ಅಧ್ಯಕ್ಷ ಟಿ.ಕೆ. ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತ್ ಕುಮಾರ್, ಹಾಗೂ ಒಕ್ಕೂಟದ ವಿಸ್ತಾರಣಾಧಿಕಾರಿ ಬಿ.ವಿ. ವೀಣಾ, ಸಂಘದ ಸ್ಥಳ ದಾನಿಗಳಾದ ಆರ್.ಆರ್. ಕುಮಾರ್ಸೇರಿದಂತೆ ಸಂಘದ ಉಪಾಧ್ಯಕ್ಷ, ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಸಂಘದ ಮುಖ್ಯಕಾರ್ಯದರ್ಶಿ ಹೆಚ್.ಎಂ. ಬಸವರಾಜು ತಿಳಿಸಿದ್ದಾರೆ.