ಕುಶಾಲನಗರ, ಸೆ. ೫: ವೀರಾಜಪೇಟೆಯಿಂದ ಮೈಸೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೆಂಗಳೂರು ಡಿಪೋಗೆ ಸೇರಿದ ರಸ್ತೆ ಸಾರಿಗೆ ಸಂಸ್ಥೆಯ ಪವರ್ ಪ್ಲಸ್ ಸಾರಿಗೆ ಬಸ್ ಹುಣಸೂರು ಸಮೀಪ ಬನ್ನಿಕೊಪ್ಪೆ ಬಳಿ ಹೆದ್ದಾರಿಯಲ್ಲಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಶನಿವಾರ ಸಂಜೆ ೫ ಗಂಟೆಗೆ ಘಟನೆ ನಡೆದಿದ್ದು, ಅಪಾಯದ ಸುಳಿವು ಅರಿತ ಚಾಲಕ ತಕ್ಷಣ ಬಸ್ ಸ್ಥಗಿತಗೊಳಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲು ಕ್ರಮ ಕೈಗೊಂಡಿದ್ದಾರೆ. ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗದೆ ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗಕ್ಕೆ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಸಂಪೂರ್ಣ ಬಸ್ ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿ ಹಾನಿಗೆ ಒಳಗಾಗಿದೆ. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.