ಸುಂಟಿಕೊಪ್ಪ, ಸೆ. ೫: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ ವತಿಯಿಂದ ವನಮಹೋತ್ಸವ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.

ಗುಡ್ಡೆಹೊಸೂರಿನ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ಅವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ರೈತರಿಗೆ ೨೦೦ಕ್ಕೂ ಅಧಿಕ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ೬೦ ವರ್ಷ ಪೂರೈಸಿದ ಸಂಸ್ಥೆಯ ಸದಸ್ಯರನ್ನು ಸನ್ಮಾನಿಸಿ, ಅವರ ಸೇವೆ ಹಾಗೂ ಸಾಧನೆಗಳನ್ನು ಸ್ಮರಿಸಲಾಯಿತು. ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಇದೇ ಸಂದರ್ಭ್ಲ ಅಗಲಿದ ಹಿರಿಯ ಸದಸ್ಯರಾದ ಕೋಟೆರ ಶಂಭುಚAಗಪ್ಪ ಹಾಗೂ ರಮ್ಯ ಅವರ ಸೇವೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ಅವರು, ಸಂಸ್ಥೆಯ ೫೦ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ವಿವಿಧ ಕಾರ್ಯಯೋಜನೆಗಳ ಕುರಿತು ವಿವರಿಸಿದರು.

ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಗ್ಲೇನ್ ಮೆನೇಜಸ್, ಹಿರಿಯ ಸದಸ್ಯರಾದ ಡಾ. ಯಶೋಧರ ಪೂಜಾರಿ, ಕೆ.ಡಿ. ರಾಮಯ್ಯ ಹಾಗೂ ಕೆ.ಸಿ. ವಿಶ್ವನಾಥ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.