ವೀರಾಜಪೇಟೆ, ಸೆ. ೫: ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತು ಹಾಗೂ ಸಾಮಾಜಿಕ ಜಾಲತಾಣಕ್ಕೆ ದಾಸರಾಗದೆ ನಿರ್ದಿಷ್ಟ ಗುರಿ ಹೊಂದಿ ಅದನ್ನು ಸಾಧಿಸುವ ಕಡೆ ನಿರಂತರ ಪ್ರಯತ್ನ, ಕಠಿಣ ಪರಿಶ್ರಮ ಪಡಬೇಕೆಂದು ವೀರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟರು.

ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನ ಸಂಘದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ೨೦೨೬-೨೭ ನೇ ಶೈಕ್ಷಣಿಕ ಸಾಲಿಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಹಾಗೂ ತರಗತಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪದವಿ ಹಂತದ ವಿದ್ಯಾರ್ಥಿ ಜೀವನವು ಅತ್ಯಂತ ಮುಖ್ಯ ಘಟವಾಗಿದ್ದು ಈ ಹಂತದಲ್ಲಿ ಕೆಲವರು ತಪ್ಪು ಹಾದಿ ತುಳಿದು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಮುಂದಿನ ಜೀವನ ಹಾಳುಮಾಡಿಕೊಳ್ಳುದರೊಂದಿಗೆ ತಮ್ಮ ತಂದೆ, ತಾಯಿ ಹಾಗೂ ಶಿಕ್ಷಣ ಸಂಸ್ಥೆಯ ಹೆಸರನ್ನು ಹಾಳುಮಾಡುತ್ತಾರೆ. ಆದರಿಂದ ಯುವ ಸಮುದಾಯ ಮಾದಕ ವಸ್ತುಗಳಿಂದ ದೂರ ಉಳಿದು ನಿಮ್ಮ ಕನಸನ್ನು ಸಾಕಾರಗೊಳಿಸುವ ಕಡೆ ನಿರಂತವಾಗಿ ಸಾಗುವಂತೆ ಕರೆಕೊಟ್ಟರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಅಂತರರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ಕನಸಿರಬೇಕು ಹಾಗೂ ಆ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಶಿಸ್ತು ಬದ್ಧವಾದ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕೆಂದು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾವೇರಿ ಎಜುಕೇಷನ್ ಸೊಸೈಟಿಯ ನಿರ್ದೇಶಕರಾದ ಪುಚ್ಚಿಮಾಡ ಟಿ.ಸುಬ್ಬಯ್ಯ, ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳ ಆದರ್ಶವನ್ನು ಪಾಲಿಸಿ ಆದರ್ಶಮಯ ಜೀವನ ನಡೆಸುವ ಚಿಂತನೆ ಹೊಂದಬೇಕು ಎಂದರು.

ಕಳೆದ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ೧೦೦ ಕ್ಕೆ ೧೦೦ ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯ ಮೇಲೆ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ .ಜಿ ವೀಣಾ , ಐಕ್ಯೂಎಸಿ ಸಂಯೋಜಕ ಎಲ್.ಆರ್ ರಾಘವೇಂದ್ರ, ವಿದ್ಯಾರ್ಥಿ ಕ್ಷೇಮಪಾಲನ ಸಂಘದ ಮುಖ್ಯಸ್ಥ ಸೋಮಣ್ಣ ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಪ್ರೊ. ಎಂ.ಕೆ. ಮೊಣ್ಣಪ್ಪ , ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ. ಪದ್ಮ, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.