ಕಡಂಗ, ಸೆ. ೫: ಕಡಂಗದ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ವಿತರಣಾ ಕಾರ್ಯಕ್ಮ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭವ್ಯಶ್ರೀ, ಮಾಜಿ ನರಿಯಂದಡ ಗ್ರಾಮ ಪಂಚಾಯತಿ ಸದಸ್ಯರಾದ ಸುಬೀರ್ ಸಿ. ಇ. ಹಾಗೂ ಗ್ರಾಮದ ರಜಾಕ್ ಅವರು ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಾವತಿ ಹೆಚ್. ಎಸ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.