ಸೋಮವಾರಪೇಟೆ, ಸೆ. ೬: ಮಣ್ಣಿನೊಂದಿಗೆ ಅವಿನಾಭಾವ ಸಂಬAಧ ಹೊಂದಿರುವ, ರೈತಾಪಿ ವರ್ಗವೇ ಹೆಚ್ಚಾಗಿರುವ ಒಕ್ಕಲಿಗ ಸಮುದಾಯದವರು ಇಂದು ತಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಕೂಗೂರಿನ ಕೆಸರು ಗದ್ದೆಯಲ್ಲಿ ಮಿಂದೆದ್ದು ಕ್ರೀಡಾಸ್ಫೂರ್ತಿ ಮೆರೆದರು.
ಒಕ್ಕಲಿಗರ ಯುವ ವೇದಿಕೆ ವತಿಯಿಂದ ಕೂಗೂರು ಗ್ರಾಮದ ದೇವರಾಜು ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ೧೦ನೇ ವರ್ಷದ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೂರಾರು ಕ್ರೀಡಾಪಟುಗಳು, ಸಾವಿರಾರು ಕ್ರೀಡಾಪ್ರೇಮಿಗಳು ಕ್ರೀಡಾಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಕೊಡಗಿನ ಜನರಲ್ಲಿ ಮುಗ್ಧತೆ ಹಾಗೂ ಸ್ವಾಭಿಮಾನ ಅಪಾರವಾಗಿದ್ದು, ಇಲ್ಲಿನ ಜನರ ನಡುವಿನ ಸಂಬAಧಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಗ್ರಾಮೀಣ ಸಂಸ್ಕೃತಿ ಮತ್ತು ಕೃಷಿಯೊಂದಿಗೆ ಬೆಸೆದುಕೊಂಡಿರುವ ಕೆಸರು ಗದ್ದೆ ಕ್ರೀಡಾಕೂಟಗಳು ಸಮುದಾಯದ ಜನರನ್ನು ಒಂದೆಡೆ ಸೇರಿಸುವುದರ ಜೊತೆಗೆ ಪರಸ್ಪರ ಆತ್ಮೀಯತೆ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತವೆ. ಇಂತಹ ಕಾರ್ಯಕ್ರಮಗಳನ್ನು ಪ್ರತಿವರ್ಷವೂ ಮುಂದುವರಿಸಿಕೊAಡು ಹೋಗಬೇಕು ಎಂದು ಕರೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಜಿಲ್ಲೆಯಲ್ಲೂ ಒಕ್ಕಲಿಗರ ಕಟ್ಟಡಗಳನ್ನು ನಿರ್ಮಿಸುವ ಮೂಲಕ ಒಕ್ಕಲಿಗ ಸಮುದಾಯದ ಬಡವರು ಹಾಗೂ ಅಗತ್ಯವಿರುವವರಿಗೆ ಅನುಕೂಲ ಕಲ್ಪಿಸುವ ಕೆಲಸ ಮಾಡಲಾಗುವುದು ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ಗದ್ದೆ ನಾಟಿ ಕೊಡಗಿನ ಕೃಷಿ ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ರೈತರ ಗಮನ ತೋಟಗಳತ್ತ ಹೆಚ್ಚಾಗಿದೆ. ಇಂತಹ ಕ್ರೀಡಾಕೂಟಗಳು ಸಮುದಾಯದ ಒಗ್ಗಟ್ಟಿಗೆ ಸಹಕಾರಿಯಾಗುತ್ತವೆ. ಪ್ರಸಕ್ತ ಸಾಲಿನಲ್ಲಿ ಒಕ್ಕಲಿಗರ ಸಂಘದಿAದ ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ವಸತಿ ನಿಲಯ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಬೆಂಬಲ ಅಗತ್ಯವಾಗಿದೆ ಎಂದು ಮನವಿ ಮಾಡಿದರು.
ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ.ಬಿ. ಸುರೇಶ್ ಮಾತನಾಡಿ, ೨೦೧೩ರಲ್ಲಿ ಸ್ಥಾಪನೆಯಾದ ವೇದಿಕೆ ಕೊಡಗಿನ ರೈತರ ಉಳಿವಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಸಿ ಮತ್ತು ಡಿ ಭೂಮಿ ಸಮಸ್ಯೆಯಲ್ಲೂ ರೈತರ ಪರವಾಗಿ ವೇದಿಕೆ ಹೋರಾಟ ನಡೆಸಿದೆ ಎಂದರು.
ವೇದಿಕೆಯ ಸ್ಥಾಪಕ ಅಧ್ಯಕ್ಷ ಬಿ.ಜೆ. ದೀಪಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಗದ್ದೆ ಕ್ರೀಡಾಕೂಟದ ಮೂಲಕ ನಮ್ಮ ಸಮುದಾಯದ ಜನರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ವೇದಿಕೆಯ ದಿವಾಕರ್ ಕೂತಿ ಸ್ವಾಗತಿಸಿ, ಲಕ್ಷಿö್ಮÃಶ್ ಜಿಮ್ಮಿ ನಿರೂಪಿಸಿದರು . ಕಾರ್ಯಕ್ರಮದಲ್ಲಿ ಗದ್ದೆ ಮಾಲೀಕ ದೇವರಾಜ್, ಕೂಗೂರು ಗ್ರಾಮಾಧ್ಯಕ್ಷ ಮಹೇಶ್, ದಾನಿಗಳಾದ ನಾಗರಾಜು ಕೂಗೂರು, ವೇದಿಕೆಯ ಪೃಥ್ವಿ ಗೌಡಳ್ಳಿ, ನತೀಶ್ ಮಂದಣ್ಣ, ಪ್ರಸೀ ಗೌಡಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಂತರ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ಥ್ರೋಬಾಲ್, ಹಗ್ಗ ಜಗ್ಗಾಟ, ಪುರುಷ ಹಾಗೂ ಮಹಿಳೆಯರಿಗೆ, ಮಕ್ಕಳಿಗೆ ಕೆಸರು ಗದ್ದೆ ಓಟ ಸೇರಿದಂತೆ ಇನ್ನಿತರ ಕ್ರೀಡಾಕೂಟಗಳು ನಡೆದವು.