ಗೋಣಿಕೊಪ್ಪಲು, ಸೆ. ೬: ಗೋಣಿಕೊಪ್ಪ ಸುಸಜ್ಜಿತ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಕುರ್ಚಿ ಹಾಗೂ ಕಸವನ್ನು ಹಾಕಲು ಬುಟ್ಟಿಯ ವ್ಯವಸ್ಥೆ ಮಾಡಲಾಗಿದೆ.
ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಮುಂಜಾನೆ ಆಗಮಿಸಿ, ಅಗತ್ಯ ಸೌಕರ್ಯಗಳನ್ನು ಉದ್ಘಾಟಿಸಿದರು.
ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತವಾಗಿ ವೈಪೈ ವ್ಯವಸ್ಥೆಯನ್ನು ಸದ್ಯದಲ್ಲಿಯೇ ಮಾಡಲಾಗುವುದು. ನಿಲ್ದಾಣದಲ್ಲಿ ಶುಚಿತ್ವ ಕಾಪಾಡಬೇಕು, ಎಲ್ಲೆಂದರಲ್ಲಿ ಉಗುಳುವುದು, ಕಸ ಎಸೆಯುವುದು ಮಾಡಬಾರದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಗೋಣಿಕೊಪ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಮಾಜಿ ಉಪಾಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತರ ಘಟದ ಅಧ್ಯಕ್ಷ ಜುನೈದ್, ನಾಯಂದಿರ ಶಿವಾಜಿ, ಪಂಚಾಯಿತಿ ಮಾಜಿ ಸದಸ್ಯರು, ಪಕ್ಷದ ಮುಖಂಡರುಗಳಾದ ಅಜ್ಜಿಕುಟ್ಟಿರ ಪೊನ್ನಪ್ಪ, ಹ್ಯಾರೀಶ್, ಖಾಲೀದ್, ರಾಜಶೇಖರ್ ಸೇರಿದಂತೆ ಪ್ರಮುಖರು ಇದ್ದರು.