ಮಡಿಕೇರಿ, ಸೆ. ೬: ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ೬ ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ಹಾಗೂ ರಾಧೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು.