ಮಡಿಕೇರಿ, ಸೆ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೯ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಮಡಿಕೇರಿ ತಾಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.