ಶನಿವಾರಸAತೆ, ಸೆ. ೭: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಭಾನುವಾರ ನಡೆದಿದೆ. ಶನಿವಾರಸಂತೆ ಪೊಲೀಸರು ತಕ್ಷಣ ಕಾರ್ಯ ಪ್ರವೃತ್ತರಾಗಿ ಆರೋಪಿ ರಮೇಶ್ (೨೮) ಎಂಬಾತನನ್ನು ಬಂಧಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕ ಜಿ.ಕೃಷ್ಣರಾಜ್ ಪ್ರಕರಣ ದಾಖಲಿಸಿ, ನಂತರ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.