ಗೋಣಿಕೊಪ್ಪಲು. ಸೆ. ೭: ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪ ಬೈಪಾಸ್ ರಸ್ತೆಯ ಕಾಂಕ್ರೀಟ್ ರಸ್ತೆ ಅಭಿವೃದ್ದಿಗೆ ೪೦ ಲಕ್ಷ ಅನುದಾನವನ್ನು ಒದಗಿಸಿದ್ದು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾ ಪೂಣಚ್ಚ, ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ಧ್ಯಾನ್ ದೇವಯ್ಯ, ಗ್ರಾ.ಪಂ. ಮಾಜಿ ಸದಸ್ಯ ಧ್ಯಾನ್ ಸುಬ್ಬಯ್ಯ, ಪಕ್ಷದ ಮುಖಂಡರುಗಳಾದ ಪಿ.ಜಿ. ರಾಜಶೇಖರ್, ಮಾಳೇಟಿರ ಬೋಪಣ್ಣ, ಪ್ರದೀಪ್, ಕುಂಡಚ್ಚಿರ ಮಂಜು ದೇವಯ್ಯ, ಕರ್ಣರಾಜ್, ರಾಜೇಶ್ ರೈ, ನಾಚಪ್ಪ, ಖಾಲೀದ್, ಅನಿಶ್, ಬೆನ್ನಿ, ಥೋಮಸ್ ಹಾಗೂ ಪಕ್ಷದ ಮುಖಂಡರು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.