ಮಡಿಕೇರಿ, ಸೆ. ೭: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ತಂತ್ರಾAಶದ ಮುಖಾಂತರ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.೨ ಲಕ್ಷಗಳವರೆಗೆ ಆರ್ಥಿಕ ನೆರವು, ರೂ.೧ ಲಕ್ಷಗಳವರೆಗಿನ ಸಾಲದಲ್ಲಿ ಶೇ.೨೦ರಷ್ಟು ಗರಿಷ್ಠ ರೂ೨೦ ಸಾವಿರಗಳ ಸಹಾಯಧನ ಹಾಗೂ ರೂ.೧.೦೧ ಲಕ್ಷದಿಂದ ರೂ.೨ ಲಕ್ಷದವರೆಗೆ ಶೇ.೧೫ ರಷ್ಟು ಕನಿಷ್ಠ ರೂ.೨೦ ಸಾವಿರಗಳಿಂದ ಗರಿಷ್ಠ ರೂ.೩೦ ಸಾವಿರ ಸಹಾಯಧನ ಉಳಿಕೆ ಮೊತ್ತ ಶೇ.೪ ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ.೧.೨೦ ಲಕ್ಷಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು,
ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ರೂ.೩.೭೫ ಲಕ್ಷ ಹಾಗೂ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.೫೦ ಸಾವಿರಗಳ ಸಾಲವನ್ನು ಶೇ.೪ರ ಬಡ್ಡಿದರದಲ್ಲಿ ಒದಗಿಸಲಾಗುವುದು. ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ೯೮ ಸಾವಿರ ಮತ್ತು ಪಟ್ಟಣ ಪ್ರದೇಶದವರಿಗೆ ೧.೨೦ ಲಕ್ಷ ರೂ.ಗಳ ಮಿತಿಯೊಳಗಿರಬೇಕು.
ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಸಿಇಟಿ ಮತ್ತು ನೀಟ್ ಮತ್ತಿತರ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ ೨೮ ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ ೧ ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ೪ ಲಕ್ಷ ರೂ.ಗಳಿಂದ ರೂ ೫ ಲಕ್ಷ ರೂ.ಗಳಿಗೆ ವಾರ್ಷಿಕ ಶೇ.೨ರ ಬಡ್ಡಿದರದಲ್ಲಿ ಸಾಲ ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.೩.೫೦ ಲಕ್ಷಗಳ ಮಿತಿಯಲ್ಲಿರಬೇಕು. ಮತ್ತು ವಯೋಮಿತಿ ೩೦ ವರ್ಷದೊಳಗಿರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಮಂಜೂರಾಗಿ ಹಿಂದಿನ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮುಂದುವರೆಸುವುದಕ್ಕೆ ೨ನೇ ಹಾಗೂ ತದನಂತರದ ಕಂತುಗಳ ಸಾಲ ಪಡೆಯಲು ಹಿಂದಿನ ೨ ಸೆಮಿಸ್ಟರ್ಗಳ ಅಂಕಪಟ್ಟಿ, ಪ್ರಸಕ್ತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಜಾಮೀನುದಾರರ/ಪೋಷಕರ ಒಪ್ಪಿಗೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ, ಮ್ಯಾನೇಜ್ ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ ೧೫ ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.೬೦ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಕಿS Woಡಿಟಜ ಖಚಿಟಿಞiಟಿg ೧೦೦೦ ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ ೨೫ ಲಕ್ಷ ರೂ.ಗಳು ಹಾಗೂ ಪೂರ್ಣ ಕೋರ್ಸ್ನ ಅವಧಿಗೆ ೫೦ ಲಕ್ಷ ರೂ.ಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ, ವಿದ್ಯಾರ್ಥಿಯ ವೀಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೋರ್ಸ್ಗಳಿಗೆ ವಯೋಮಿತಿ ೩೨, ಪಿಎಚ್ಡಿ ಕೋರ್ಸ್ಗಳಿಗೆ ೩೫ ವರ್ಷಗಳ ವಯೋಮಿತಿಯೊಳಗೆ ಇರಬೇಕು.
ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ಗಳು ಮಂಜೂರು ಮಾಡುವ ಘಟಕ ವೆಚ್ಚದ ಶೇ.೫೦ ರಷ್ಟು, ಗರಿಷ್ಟ ರೂ.೩ ಲಕ್ಷಗಳ ಸಹಾಯಧನವನ್ನು(ಸಬ್ಸಿಡಿ) ನಿಗಮದಿಂದ ಬಿಡುಗಡೆ ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.೧.೨೦ ಲಕ್ಷಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೨೧ ರಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
ಹೊಲಿಗೆ ಯಂತ್ರ ವಿತರಣೆ ಯೋಜನೆ: ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.೧.೨೦ ಲಕ್ಷಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿ://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ನಿಗಮದ ವೆಬ್ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಅಥವಾ ೮೦೫೦೭೭೦೦೦೫ ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್, ೩೦ ರೊಳಗೆ ಸೇವಾಸಿಂಧು ತಂತ್ರಾAಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.