ಶನಿವಾರಸಂತೆ, ಸೆ. ೭: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಸುತ್ತಮುತ್ತಲಿನ ಆವರಣದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ನೇತೃತ್ವದಲ್ಲಿ ವಿವಿಧ ಸಂಘಸAಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸೇರಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಹೊನ್ನಮ್ಮನ ಕೆರೆ ಆವರಣ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿ ಶ್ರಮದಾನ ಮಾಡಲಾಯಿತು.ಈ ಸಂದರ್ಭ ದೊಡ್ಡಮಳ್ತೆ, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು, ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಎನ್‌ಆರ್‌ಎಲ್‌ಎಂ ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.