ಸೋಮವಾರಪೇಟೆ, ಸೆ. ೭: ಇಲ್ಲಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೬-೨೭ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಹಪಠ್ಯ ಚಟುವಟಿಕೆಗಳು ಅತ್ಯವಶ್ಯಕವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಒಂದಲ್ಲ ಒಂದು ರೀತಿಯ ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾಲೇಜು ಅಭಿವೃಧ್ಧಿ ಸಮಿತಿಯ ಸದಸ್ಯೆ ಮಿಲ್‌ಡ್ರೆಡ್ ಗೊನ್ಸಾಲ್ವೇಸ್ ಮಾತನಾಡಿ, ಇಂದಿನ ಯುಗದಲ್ಲಿ ಕೇವಲ ಅಂಕಗಳಿಕೆಯಿAದ ಮೌಲ್ಯಗಳನ್ನು ಬಿತ್ತಲು ಸಾಧ್ಯವಾಗುವುದಿಲ್ಲ. ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಮತ್ತು ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಬಿ.ಡಿ. ಹರ್ಷ ಮಾತನಾಡಿ, ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿಯೂ ಸಾಧನೆ ತೋರುತ್ತಾರೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಪರಸ್ಪರ ಪೂರಕವಾಗಿವೆ. ಪದವಿ ಪಡೆಯುವ ಜೊತೆಗೆ ಒಂದಿಲ್ಲೊAದು ಕ್ರೀಡೆ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಸ್.ಆರ್. ಸೋಮೇಶ್, ಕಾಲೇಜಿನ ಐ.ಕ್ಯು.ಎ.ಸಿ. ಸಂಚಾಲಕರಾದ ಎಂ.ಎA. ಸುನೀತ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಎಚ್. ಹುಚ್ಚೇಗೌಡ, ಕಾಲೇಜಿನ ಬೋಧಕೇತರ ಸಿಬ್ಬಂದಿ ಹೆಚ್.ಜೆ. ಜವರಪ್ಪ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರುಗಳಾದ ಸುರೇಂದ್ರ ಬಳಗುಂದ, ಸುಶೀಲ ಮತ್ತು ಹರ್ಷ ಕಿರಗಂದೂರು, ವಿದ್ಯಾರ್ಥಿ ಪ್ರತಿನಿಧಿಗಳಾದ ಐಶ್ವರ್ಯ ಮತ್ತು ಪ್ರಮೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.