ಮಡಿಕೇರಿ, ಸೆ. ೭ : ಭಾರತ-ಪಾಕ್ ನಡುವಿನ ೧೯೬೫ರ ಯುದ್ಧದಲ್ಲಿ ಶತ್ರು ರಾಷ್ಟçದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಸಾಹಸಿ ಕೊಡಗಿನ ಸ್ಕಾ÷್ವಡ್ರÀನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ೬೧ನೇ ಪುಣ್ಯಸ್ಮರಣಾ ಕಾರ್ಯಕ್ರಮ ಕೊಡವ ಮಕ್ಕಡ ಕೂಟ, ಅಜ್ಜಮಾಡ ಕುಟುಂಬಸ್ಥರು ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಮಡಿಕೇರಿಯಲ್ಲಿ ನಡೆಯಿತು.

ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿಯ ಸ್ಕಾ÷್ವ.ಲೀ. ದೇವಯ್ಯ ವೃತ್ತದಲ್ಲಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸುವ ಮೂಲಕ ವೀರ ಸೇನಾನಿಗೆ ಗೌರವ ಅರ್ಪಿಸಲಾಯಿತು.

ಸ್ಕಾ÷್ವ.ಲೀ.ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ಕೊಡಂದೆರ ನಂದಾ ಕಾರ್ಯಪ್ಪ ಅವರು ಮಹಾನ್ ಯೋಧನ ಸಾಹಸ ಮತ್ತು ರಾಷ್ಟçಕ್ಕಾಗಿ ಮಾಡಿದ ಬಲಿದಾನದÀ ಕುರಿತು ಸ್ಮರಣೆಯ ಮೂಲಕ ಯುವ ಸಮೂಹದಲ್ಲಿ ಪ್ರೇರಣೆಯನ್ನು ತುಂಬಬೇಕೆAದು ಕರೆ ನೀಡಿದರು.

ಸ್ಕಾ÷್ವ.ಲೀ.ದೇವಯ್ಯ ಅವರು ರಾಷ್ಟç ರಕ್ಷಣೆೆಗಾಗಿ ಯುದ್ಧ ವಿಮಾನದಲ್ಲಿ ಶತ್ರು ರಾಷ್ಟç ಪಾಕಿಸ್ತಾನದ ವಿರುದ್ಧ ವಿರೋಚಿತ ಹೋರಾಟವನ್ನು ನಡೆಸಿದರು. ಅವರು ೧೯೬೫ ರಲ್ಲಿ ಹುತಾತ್ಮರಾದರೂ ಸುಮಾರು ೨೩ ವರ್ಷಗಳ ಬಳಿಕ ವಿಚಾರ ಜಗತ್ತಿನ ಅರಿವಿಗೆ ಬಂದಿತು. ಬಳಿಕ ಭಾರತ ಸರ್ಕಾರ ಅವರಿಗೆ ಮರಣೋತ್ತರ “ಮಹಾವೀರ ಚಕ್ರ”ವನ್ನು ಪ್ರದಾನ ಮಾಡಿತು ಎಂದರು.

ಭಾರತೀಯ ವಾಯುದಳದ ನಾನ್ ಕಮೀಷನ್ಡ್ ಆಫೀಸರ್ ರಡಾರ್ ಮತ್ತು ಮಿಸೈಲ್ ಇನ್‌ಸ್ಟçಕ್ಟರ್ ಮುಂಜಾAದಿರ ರಾಜ ಅಪ್ಪಯ್ಯ ಮಾತನಾಡಿ, ೧೯೬೫ರ ಇಂಡೋ ಪಾಕ್ ಯುದ್ಧದ ಸಂದರ್ಭ, ಸ್ಕಾ÷್ವ.ಲೀ.ಅಜ್ಜಮಾಡ ದೇವಯ್ಯ ಅವರು, ಶತ್ರುರಾಷ್ಟç ಪಾಕಿಸ್ತಾನ ಅಂದಿನ ಕಾಲಘಟ್ಟದಲ್ಲಿ ಹೊಂದಿದ್ದ ಅತ್ಯಾಧುನಿಕ ಯುದ್ಧ ವಿಮಾನವನ್ನು, ತಾವು ಚಾಲನೆ ಮಾಡುತ್ತಿದ್ದ ಯುದ್ಧ ವಿಮಾನ ಅದಕ್ಕಿಂತ ಕೆಳ ಮಟ್ಟದ್ದಾದರು, ಅದನ್ನು ಲೆಕ್ಕಿಸದೆ ತಮ್ಮ ಚಾಕಚಕ್ಯತೆ, ಅಸಾಮಾನ್ಯ ಸಾಹಸ, ದೃಢನಿಶ್ಚಯಗಳ ಮೂಲಕ ಹೊಡೆದುರುಳಿಸುವ ಮೂಲಕ ಸಾಹಸ ಮೆರೆÉದಿದ್ದರು. ಆದರೆ, ಈ ವಿಚಾರ ಸಾಕಷ್ಟು ವರ್ಷಗಳ ಕಾಲ ಬೆಳಕಿಗೆ ಬಂದಿರಲಿಲ್ಲ, ನಂತರ ಅಂದಿನ ದಿನಗಳಲ್ಲಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನಿ ಸೈನ್ಯದ ಅಧಿಕಾರಿಯ ಮೂಲಕ ಬೆಳಕಿಗೆ ಬಂದಿತ್ತೆAದು ತಿಳಿಸಿದರು..

ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಮಾತನಾಡಿ, ಸ್ಕಾ÷್ವ.ಲೀ.ಅಜ್ಜಮಾಡ ದೇವಯ್ಯ ಅವರ ಪುಣ್ಯ ದಿನ ಎನ್ನುವುದಕ್ಕೂ ಮಿಗಿಲಾಗಿ, ಈ ದಿನ ತ್ಯಾಗ, ಬಲಿದಾನಗಳ ದಿನವೇ ಆಗಿದೆ. ಸ್ಕಾ÷್ವ.ಲೀ.ದೇವಯ್ಯ ಅವರ ಸಾಹಸ, ರಾಷ್ಟç ರಕ್ಷಣೆÉಯೆಡೆಗಿನ ಅಚಲ ನಿರ್ಧಾರಗಳು ಇಂದಿನ ಯುವ ಸಮೂಹಕ್ಕೆ ಸ್ಫೂರ್ತಿಯನ್ನು ನೀಡಲಿದೆ ಎಂದು ತಿಳಿಸಿದರು.

ಕಾವೇರಿ ಮೂಲ ಸ್ವರೂಪ ಸಂರಕ್ಷಣಾ ಸಮಿತಿಯ ಪದಾಧಿಕಾರಿ ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಸ್ಕಾ÷್ವ.ಲೀ.ದೇವಯ್ಯ ಅವರ ಸಾಹಸ ಮತ್ತು ಬಲಿದಾನಗಳ ಹಿನ್ನೆಲೆಯಲ್ಲಿ ಅವರಿಗೆ ಸೇವಾ ಪದಕಗಳಲ್ಲಿ ಮೊದಲನೆಯದಾದ ಪರಮ ವೀರಚಕ್ರವನ್ನೆ ಮರಣೋತ್ತರವಾಗಿ ಪ್ರದಾನ ಮಾಡಬೇಕಾಗಿತ್ತು ಎಂದು ಅಭಿಪ್ರಾಯಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ವಾಯುದಳದ ಜೂನಿಯರ್ ವಾರಂಟ್ ಆಫೀಸರ್ ಬಾಳೆಯಡ ಮಂದಪ್ಪ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ, ಡಿವೈಎಸ್‌ಪಿ ಪಿ.ಎ.ಸೂರಜ್, ಕೊಡಗು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಪ್ರೊ.ಮೇಚಿರ ರವಿಶಂಕರ್ ನಾಣಯ್ಯ, ಕೊಡಗು ವಿದ್ಯಾಲಯ ಶಾಲೆಯ ಎನ್‌ಸಿಸಿ ಅಧಿಕಾರಿ ಮೇಜರ್ ದಾಮೋದರ್ ಗೌಡ ಐ., ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರುಗಳಾದ ಮೂವೆರ ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯ ಚೊಟ್ಟೆಯಂಡ ಸಂಜು ಕಾವೇರಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಜಿಲ್ಲಾ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ಸಾಹಿತಿ ಬೊಜ್ಜಂಗಡ ಡಾ.ಅವನಿಜ ಸೋಮಯ್ಯ, ಅಜ್ಜಮಾಡ ಬೆಳ್ಯಪ್ಪ, ಅಜ್ಜಮಾಡ ಕಾರ್ಯಪ್ಪ, ಅಜ್ಜಮಾಡ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಅಜ್ಜಮಾಡ ಮಂಜುನಾಥ್, ಮಹೇಶ್, ಅಜ್ಜಮಾಡ ಅಯ್ಯಣ್ಣ, ಅಜ್ಜಮಾಡ ಜಗತ್, ಅಜ್ಜಮಾಡ ಸುಮನ್, ಅಜ್ಜಮಾಡ ದೀಕ್ಷ, ಅಜ್ಜಮಾಡ ಅನಿಕಾ, ದಾನಿಗಳಾದ ಉಳ್ಳಿಯಡ ನಂದಾ ನಂಜಪ್ಪ, ಮಾದೇಟಿರ ಟಿ.ಪ್ರಕಾಶ್ ತಿಮ್ಮಯ್ಯ, ನಿವೃತ್ತ ಲೆ.ಕರ್ನಲ್ ಮುಲ್ಲೇರ ಕಾವೇರಪ್ಪ, ಮಾಜಿ ಸೈನಿಕರ ಸಂಘದ ಮಡಿಕೇರಿ ಅಧ್ಯಕ್ಷ ಪಾನಿಕುಟ್ಟಿರ ಕುಟ್ಟಪ್ಪ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಸುಬೇದಾರ್ ಮೇಜರ್ ನಾಟೋಳಂಡ ಸುರೇಶ್ ಸೋಮಯ್ಯ, ಮಾಜಿ ಸೈನಿಕರ ಸಂಘದ ಜಂಟಿ ಕಾರ್ಯದರ್ಶಿ ಸುಬೇದಾರ್ ಮೇಜರ್ ವಾಸಪ್ಪ, ಕುಟ್ಟಂಡ ನಂದ ಮಾದಪ್ಪ, ಮಾದೆಯಂಡ ಕೆ.ನಾಚಪ್ಪ, ಕನ್ನಂಡ ಸುರೇಶ್, ಕೂಪದಿರ ಮುತ್ತಣ್ಣ, ತೊತ್ತಿಯಂಡ ಗಣಪತಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೆ.ಎಂ.ಬಿ.ಗಣೇಶ್, ಸಮಾಜ ಸೇವಕ ಮಂಡೇಪAಡ ರತನ್ ಕುಟ್ಟಯ್ಯ, ಮಣವಟ್ಟಿರ ಚಿಣ್ಣಪ್ಪ, ನಾಪೋಕ್ಲು ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸೈನಿಕರ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ಆರ್.ಶೆಟ್ಟಿ, ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ಅಭಿಮಾನಿಗಳು, ಸೇರಿದಂತೆ ಅಜ್ಜಮಾಡ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೀರ ಸೇನಾನಿಯ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಪ್ರತಿವರ್ಷ ಅಚ್ಚುಕಟ್ಟಾಗಿ ಆಚರಿಸುವ ಮೂಲಕ ದೇಶಭಕ್ತಿ ಮತ್ತು ಸೇನಾ ಪರಂಪರೆಯ ಕುರಿತು ಯುವ ಸಮೂಹದಲ್ಲಿ ಸ್ಫೂರ್ತಿಯನ್ನು ತುಂಬುತ್ತಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಕಾರ್ಯವನ್ನು ಶ್ಲಾಘಿಸಿ ನಿವೃತ್ತ ಏರ್ ಮಾರ್ಷಲ್ ಕೊಡಂದೆರ ನಂದಾ ಕಾರ್ಯಪ್ಪ ಅವರು ಏರ್ ಫೋರ್ಸ್ ಲಾಂಛನದ ಬ್ಯಾಡ್ಜ್ನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು.