ವೀರಾಜಪೇಟೆ, ಸೆ. ೭: ಶ್ರೀ ಗಣೇಶೋತ್ಸವ ಆಚರಣೆಗೆ ಸಂಬAಧಿಸಿದAತೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಶಾಸಕರ ವೀರಾಜಪೇಟೆ ಗೃಹ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಗಣೇಶೋತ್ಸವ ಸಮಿತಿಯ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಿ, ಅತ್ಯಂತ ವಿಜ್ರಂಭಣೆ ಹಾಗೂ ಜವಾಬ್ದಾರಿಯಿಂದ ಗಣೇಶೋತ್ಸವವನ್ನು ಆಚರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಸಮಿತಿ ಪದಾಧಿಕಾರಿಗಳ ಅಹವಾಲು ಹಾಗೂ ಬೇಡಿಕೆಗಳನ್ನು ಆಲಿಸಿದ ಅವರು, ಹಬ್ಬದ ಯಶಸ್ವಿ ಆಚರಣೆಗೆ ಅಗತ್ಯವಿರುವ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿ, ಹಲವು ವಿಚಾರಗಳÀ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಧ್ವನಿವರ್ಧಕ ಬಳಕೆ ಹಾಗೂ ಮುಂಜಾಗ್ರತಾ ಕ್ರಮಗಳ ವಿಷಯದಲ್ಲಿ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಕರೆ ನೀಡಿದರು.
ಸಭೆಯಲ್ಲಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರಕಾರದ ಸೂಚನೆಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಸಭೆಯಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್, ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ, ಮಾಜಿ ನಗರ ಅಧ್ಯಕ್ಷ ಮಾದಂಡ ತಿಮ್ಮಯ್ಯ, ವಕೀಲ ನರೇಂದ್ರ ಕಾಮತ್ ಸೇರಿದಂತೆ ವಿವಿಧ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.