ಕೂಡಿಗೆ, ಸೆ. ೮: ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನವಾಗಿ ಸೀಗೆಹೊಸೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ವಾಣಿಜ್ಯ ಮಳಿಗೆ ಮತ್ತು ಗೋದಾಮು ಕಟ್ಟಡದ ಉದ್ಘಾಟನೆ ತಾ. ೯ ರಂದು (ಇಂದು) ನಡೆಯಲಿದೆ.

ನೂತನ ಕಟ್ಟಡದ ಉದ್ಘಾಟನೆಯನ್ನು ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೊಡಂದೆರ ಪಿ. ಗಣಪತಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಆರ್. ಸುನಿಲ್ ರಾವ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಟಿ.ಆರ್. ಶರವಣ ಕುಮಾರ್, ಎಸ್. ಸಿ. ಶರತ್ ಶೇಖರ್, ಹೆಚ್.ಕೆ. ಮಾದಪ್ಪ, ಎನ್.ಎಂ. ಉತ್ತಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶೈಲಜಾ, ಕುಶಾಲನಗರ ತಾಲೂಕು ಆಹಾರ ನಿರೀಕ್ಷಕಿ ಸ್ವಾತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.