ಮೂರ್ನಾಡು, ಸೆ. ೮: ಇಲ್ಲಿನ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೨ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದÀ ಆಟೋಟಗಳ ಕಾರ್ಯಕ್ರಮವು ಸಂಭ್ರಮದಿAz ಜರುಗಿತು.
ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್‌ನ ವತಿಯಿಂದ ಏರ್ಪಡಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ಕೋಡಂಬೂರು ಗ್ರಾಮದ ಕಾಫಿ ಬೆಳೆಗಾರರಾದ ಬಡುವಂಡ ಬಿ. ಮುತ್ತಪ್ಪ ತೆಂಗಿನಕಾಯಿಗೆ ಗುಂಡು ಹೊಡೆಯುವುದರ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು. ಮಹನೀಯರು, ಮಹಿಳೆಯರು, ಶಾಲಾ-ಕಾಲೇಜು ಮಕ್ಕಳು ವಿವಿz sÀಓಟದ ಸ್ಪರ್ಧೆಗಳು, ಭಾರದ ಕಲ್ಲು ಎಸೆತ, ನಿಂಬೆಹಣ್ಣು ಚಮಚ ಓಟ, ವಯಸ್ಕg ಓಟ, ಕಾಲುಕಟ್ಟಿ ಓಟ, ವಾದ್ಯದ ಕುಣಿತ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರು ಮುಖ್ಯ ಅತಿಥಿಗಳಿಂದ ಬಹುಮಾನ, ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡರು.
ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ಸಂಬAಧಪಟ್ಟ ಆರು ಗ್ರಾಮಗಳ ಮಹನೀಯರು ಮತ್ತು ಮಹಿಳೆಯರ ತಂಡಗಳ ಮಧ್ಯೆ ನಡೆದ ಮಹನೀಯರ ಹಗ್ಗ ಜಗ್ಗಾಟ ಪಂದ್ಯಾಟದಲ್ಲಿ ಕಿಗ್ಗಾಲು ಗ್ರಾಮದ ತಂಡವನ್ನು ಬಾಡಗ ಗ್ರಾಮದ ತಂಡವು ಸೋಲಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.
ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ಕಿಗ್ಗಾಲು ಗ್ರಾಮದ ತಂಡವು ಮುತ್ತಾರುಮುಡಿ ಗ್ರಾಮದ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಸಾರ್ವಜನಿಕರಿಗೆ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆಯಲ್ಲಿ ಅವರೆಮಾದಂಡ ಸುಗುಣ ಸುಬ್ಬಯ್ಯ (ಪ್ರಥಮ), ತೇಲಪಂಡ ಸುಬ್ಬಯ್ಯ (ದ್ವಿತೀಯ), ತಿರುಟೇರ ದಿಲನ್ ದೇವಯ್ಯ(ತೃತೀಯ) ಸ್ಥಾನ ಪಡೆದು ಬಹುಮಾನಗಳನ್ನು ಪಡೆದುಕೊಂಡರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೊಡಗು ವೈದ್ಯಕೀಯ ವಿದ್ಯಾಲಯದ ಖ್ಯಾತ ಅರಿವಳಿಕೆ ತಜ್ಞ ಡಾ. ದಂಬೆಕೋಡಿ ಎಸ್. ಅಯ್ಯಪ್ಪ ಮಾತನಾಡಿ, ಕ್ರೀಡೆ ಕೇವಲ ಸ್ಪರ್ಧೆ ಮಾತ್ರ ಅಲ್ಲ. ಪಾಠ ಪುಸ್ತಕಗಳಲ್ಲಿ ಜೀವನವನ್ನು ಓದಿ ಕಲಿಯಲು ಸಾಧ್ಯವಿಲ್ಲ. ಅನುಭವದೊಂದಿಗೆ ಬೆರೆಯುವ ಜೀವನ ಪ್ರುಬದ್ಧವಾಗಿರುತ್ತದೆ ಎಂದರು. ಕ್ಲಬ್ ಯುವಜನರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಶ್ಲಘನೀಯ ಎಂದರು.
ಮತ್ತೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಮಕ್ಕಳ ತಜ್ಞ ಡಾ. ಕೆಂಬAಡತAಡ ಗೌರವ್ ಅಯ್ಯಪ್ಪ ಮಾತನಾಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಕ್ಲಬ್‌ನ ಕ್ರೀಡಾಕೂಟz Àಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಿದ್ದರು. ವೇದಿಕೆಯಲ್ಲಿ ಕ್ಲಬ್‌ನ ಗೌ|| ಕಾರ್ಯದರ್ಶಿ ಮೇರ್ಕಜೆ ಲೋಹಿತ್ ಸೋಮಯ್ಯ, ನಿರ್ದೇಶಕರುಗಳಾದ ಪುದಿಯೊಕ್ಕಡ ಪೊನ್ನು ಮುತ್ತಪ್ಪ, ಮೂಡೆರ ಮನು ಮಾದಪ್ಪ, ಕೋಟೇರ ಮೇದಪ್ಪ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಬೈಲೆ ತಿಮ್ಮಯ್ಯ, ಪೆಮ್ಮಂಡ ಪವಿತ್ರ, ಕ್ಲಬ್‌ನ ಮಾಜಿ ಅಧ್ಯಕ್ಷರುಗಳಾದ ಚೇನಂಡ ಅಶೋಕ್, ಪಳಂಗAಡ ಅಪ್ಪಣ್ಣ ಮತ್ತು ಪುದಿಯೊಕ್ಕಡ ಬೆಲ್ಲು ಸೋಮಯ್ಯ ಉಪಸ್ಥಿತರಿದ್ದರು. ಮೂಡೆರ ಹರೀಶ್ ಕಾಳಯ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
-ನಾಗರಾಜ್