ಮಡಿಕೆರಿ, ಸೆ. ೮; ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಚೆನ್ನಮ್ಮ ಪ.ಪೂ. ಕಾಲೇಜು ತಂಡಗಳು ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿವೆ.
ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಬಾಲಕರು ಹಾಗೂ ಬಾಲಕಿಯರ ಎರಡೂ ತಂಡಗಳು ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿವೆ. ಕಾಲೇಜಿನ ಪ್ರಾಂಶುಪಾಲ ಮಂದಪ್ಪ ಹಾಗೂ ತರಬೇತುದಾರ ನಾಚಪ್ಪ ಅವರುಗಳ ಮಾರ್ಗದರ್ಶನದಲ್ಲಿ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.