ಸೋಮವಾರಪೇಟೆ, ಸೆ. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರವಾದ ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿರುವ ಶ್ರೀ ಕುಮಾರಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. ೧.೫೦ ಲಕ್ಷ ಅನುದಾನ ಮಂಜೂರಾಗಿದ್ದು, ಅನುದಾನದ ಡಿ.ಡಿ.ಯನ್ನು ದೇವಾಲಯ ಸಮಿತಿ ಪ್ರಮುಖರಿಗೆ ಹಸ್ತಾಂತರಿಸಲಾಯಿತು.

ದೇವಾಲಯ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ಜಿ. ಮೇದಪ್ಪ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ. ಲೋಕೇಶ್ ಅವರುಗಳ ಸಮಕ್ಷಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಅವರು ಡಿ.ಡಿ. ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು, ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್, ವಲಯದ ಮೇಲ್ವಿಚಾರಕ ಲಕ್ಷ್ಮಣ್, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಶಾಂತಳ್ಳಿ ಸ.ಹಿ.ಪ್ರಾ. ಶಾಲೆಗೆ ಜ್ಞಾನದೀಪ ಶಿಕ್ಷಕಿಯಾಗಿ ಆಯ್ಕೆಯಾದ ಅಶ್ವಿನಿ ಅವರಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.