ಕುಶಾಲನಗರ, ಸೆ. ೮: ಮೈಸೂರಿನ ಸೇವಾ ಭಾರತಿ ಸಂಸ್ಥೆ ವತಿಯಿಂದ ನಿರಂತರ ಮಿತ್ರ ವೃಂದ ಹಾಗೂ ಭವಿಷ್ಯ ಚಾರಿಟೇಬಲ್ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಶಿಕ್ಷಣ ತಜ್ಞರೂ ಆದ ಶೈಕ್ಷಣಿಕ ಸಮಾಲೋಚಕ ಡಾ ಜಿ.ಅಚ್ಯುತನ್, ಸಂಪನ್ಮೂಲಗಳ ಕೊರತೆಯಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದAತೆ ನೋಡುವುದು ಮತ್ತು ಅವರ ಕಲಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ ನೋಟ್ ಪುಸ್ತಕ ವಿತರಣೆ ಒಂದು ಅತ್ಯುತ್ತಮ ಮತ್ತು ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದರು.
ಸಮಾಜ ಸೇವೆಯ ಒಂದು ಭಾಗವಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಲಿಕೆಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಬರವಣಿಗೆ ಪುಸ್ತಕಗಳು, ಪೆನ್, ಪೆನ್ಸಿಲ್, ಬ್ಯಾಗ್ ಸೇರಿದಂತೆ ಅಗತ್ಯ ಶೈಕ್ಷಣಿಕ ಪರಿಕರಗಳನ್ನು ನೀಡಲಾಗುತ್ತಿದೆ ಎಂದರು.
ನಿರAತರ ಫೌಂಡೇಶನ್ ಪ್ರಮುಖರಾದ ಸಿ.ಎಸ್.ವೆಂಕಟೇಶ್ ಬಾಬು ಹಾಗೂ ರಾಧಾ ವೆಂಕಟೇಶ್ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆ ಕುರಿತು ಮಾತನಾಡಿದರು.
ಕೂಡಮಂಗಳೂರು ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಪೆರುಮಾಳ್ ಮಾತನಾಡಿದರು.
ಬಿ.ಆರ್.ಸಿ. ಎಂ.ವಿ.ಮAಜೇಶ್ ಹಾಗೂ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಶಿಕ್ಷಕರು ಇದ್ದರು. ಶಿಕ್ಷಕಿ ಟಿ.ವಿ.ಶೈಲಾ ಕಾರ್ಯಕ್ರಮ ನಿರ್ವಹಿಸಿದರು.