ಮಡಿಕೇರಿ, ಸೆ. ೯: ಪ್ರಸಕ್ತ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕು ಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ತಾ. ೧೬ ರಿಂದ ೨೪ ರವರೆಗೆ ಇಲಾಖಾ ವತಿಯಿಂದ ನಡೆಯಲಿದೆ. ಮಡಿಕೇರಿ ತಾಲೂಕಿಗೆ ತಾ. ೧೬ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಕುಶಾಲನಗರ ತಾಲೂಕಿಗೆ ತಾ. ೧೭ ರಂದು ಕೂಡಿಗೆಯ ಸೈನಿಕ ಶಾಲೆ ಹಾಗೂ ಕ್ರೀಡಾಶಾಲೆ ಮೈದಾನದಲ್ಲಿ, ಸೋಮವಾರಪೇಟೆ ತಾಲೂಕಿಗೆ ತಾ. ೧೮ ರಂದು ಕೂಡಿಗೆಯ ಕ್ರೀಡಾ ಶಾಲೆಯ ಮೈದಾನ ಮತ್ತು ಸೈನಿಕ ಶಾಲೆಯಲ್ಲಿ ತಾ. ೧೯ ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ (ಫುಟ್ಬಾಲ್) ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ವೀರಾಜಪೇಟೆ ತಾಲೂಕಿನಲ್ಲಿ ತಾ. ೨೦ ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ (ಫುಟ್ಬಾಲ್) ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ.
ತಾ. ೨೪ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ಹಾಗೂ ಕೂಡಿಗೆ ಸೈನಿಕ ಶಾಲೆ ಮತ್ತು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು.
ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಹಾಕಿಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲೂಕು ಮಹಾಬಲ ೯೯೮೦೮೮೭೪೯೯. ಮನು ೯೪೮೦೦೩೨೭೧೨, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವೆಂಕಟೇಶ್ ೯೮೪೪೩೨೬೦೦೭, ಸುರೇಶ್ ೮೮೯೨೨೭೨೯೭೨, ಪ್ರದೀಪ್ ೯೩೪೨೫೬೩೦೧೪, ಪೊನ್ನಂಪೇಟೆ ಮತ್ತು ವೀರಾಜಪೇಟೆ ಸುಬ್ಬಯ್ಯ ೮೧೯೭೭೯೦೩೫೦, ಗಣಪತಿ ೮೯೫೧೨೮೭೩೦೧ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆನ್ಲೈನ್ ನೋಂದಣಿ ಕಡ್ಡಾಯ ಪೋರ್ಟಲ್ (ಜಚಿsಚಿಡಿಚಿಛಿmಛಿuಠಿ.iಟಿ) ಆಯಾಯ ತಾಲೂಕಿನ ಕ್ರೀಡಾಪಟುಗಳು ತಮ್ಮ ತಾಲೂಕಿನ ಕ್ರೀಡಾಕೂಟದಲ್ಲಿ ಮಾತ್ರ ಭಾಗವಹಿಸಬಹುದು.
ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತೊಂದು ತಾಲೂಕಿನಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಹಾಗೆ ಕಂಡುಬAದಲ್ಲಿ ಅಂತಹ ಕ್ರೀಡಾಪಟುಗಳನ್ನು ಅನರ್ಹಗೊಳಿಸಲಾಗುತ್ತದೆ. ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿ ತರಬೇಕು. ಆಯಾಯ ದಿನದಂದು ಬೆಳಿಗ್ಗೆ ೯.೩೦ ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ನೋಂದಾಯಿಸಿಕೊಳ್ಳಬೇಕು.