ಸಿದ್ದಾಪುರ, ಸೆ. ೯: ಮುಖ್ಯ ರಸ್ತೆಯಲ್ಲಿ ಹುಲಿಯೊಂದು ಬೆಳಗ್ಗಿನ ಜಾವ ಪ್ರತ್ಯಕ್ಷಗೊಂಡು ಸಂಚರಿಸಿ ಆತಂಕ ಸೃಷ್ಟಿಸಿದ ಘಟನೆ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಕೊಳತ್ತೋಡು ಗ್ರಾಮದಲ್ಲಿ ಬುಧವಾರ ನಡೆದಿದೆ.

ಕೊಳತ್ತೋಡು ಗ್ರಾಮದ ವಸತಿ ಪ್ರದೇಶದ ರಾಜ್ಯ ಹೆದ್ದಾರಿಯಲ್ಲಿ ಬೆಳಗ್ಗಿನ ಜಾವ ೪.೩೦ ರ ಸಮಯಕ್ಕೆ ಹುಲಿ ರಸ್ತೆಯ ಮೂಲಕ ಸಮೀಪದ ತೋಟಕ್ಕೆ ತೆರಳುತ್ತಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಂತರ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನುತಾ ಚವಾಣ್ ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಉಪವಲಯ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆಯ ಸುತ್ತಮುತ್ತಲಿನಲ್ಲಿ ಹಾಗೂ ಕಾಫಿ ತೋಟಗಳಲ್ಲಿ ಹುಲಿಯ ಚಲನವಲನ ಕಂಡುಹಿಡಿಯಲು ಕೂಂಬಿAಗ್ ನಡೆಸಿದರು.

ವೀರಾಜಪೇಟೆ ವಲಯ ಅರಣ್ಯ ಸಿಬ್ಬಂದಿ ಮತ್ತು ಅಮ್ಮತ್ತಿ ಶಾಖೆಯ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡರು.

ಹುಲಿಯು ರಸ್ತೆಯ ಮೂಲಕ ಬಿಟ್ಟಂಗಾಲ ಭಾಗಕ್ಕೆ ತೆರಳಿರುವ ಕುರುಹುಗಳು ಪತ್ತೆಯಾಗಿದೆ ಎಂದು ಕಾರ್ಯಾಚರಣೆ ತಂಡದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಈ ಭಾಗದ ಸುತ್ತಮುತ್ತಲಿನಲ್ಲಿ ಹುಲಿ ಸಂಚರಿಸುತ್ತಿರುವುದು ಕಂಡುಬAದಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

- ವಾಸು