ಐಗೂರು, ಸೆ. ೧೦: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಸಮಾಜ ಸೇವಕ ಎಡಿಕೇರಿ ಪ್ರಸನ್ನ ಅವರು ರೂ. ೨೫,೦೦೦ ಧನಸಹಾಯ ನೀಡಿದರು.

ದೇವಾಲಯದ ಸಮಿತಿಯ ಪದಾಧಿಕಾರಿಗಳನ್ನು ಭೇಟಿ ಮಾಡಿದ ಎಡಿಕೇರಿ ಪ್ರಸನ್ನ ಅವರು ದೇವಾಲಯದ ಪದಾಧಿಕಾರಿಗಳಿಗೆ ಧನಸಹಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಇದ್ದರು.