ಸುಂಟಿಕೊಪ್ಪ, ಸೆ. ೧೦: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಮತ್ತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿüವೃದ್ಧಿ ಸಂಘ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೧೨ ರಂದು ಕುಶಾಲನಗರದ ಕೇರಳ ಸಮಾಜಂ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭವನ್ನು ಶಕ್ತಿ ದಿನಪತ್ರಿಕೆ ಸಂಪಾದಕರಾದ ಜಿ.ಚಿದ್ವಿಲಾಸ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ. ಸತೀಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ವೇವ್ ಸಂಘಟನೆಯ ಸಂಚಾಲಕ ಕೆ.ಎ. ಲತೀಫ್, ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಕೊಡಗು ಪತ್ರಕರ್ತರ ಸಂಘದ ಖಜಾಂಚಿ, ಕಾರ್ಯಕ್ರಮದ ಸಂಚಾಲಕ ಟಿ.ಕೆ. ಸಂತೋಷ್, ದತ್ತಿ ಪ್ರಶಸ್ತಿ ದಾನಿಗಳಾದ ಕೊರವಂಡ ವಸಂತಿ ಪೊನ್ನಪ್ಪ ಮತ್ತು ಕೊರವಂಡ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಮಟ್ಟದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿರುವ ಶಿರಂಗಾಲ ಸರಕಾರಿ ಪದವಿ ಪೂರ್ವ ಕಾಲೇಜಿನ ಬಿ.ಪಿ .ಪ್ರಣಯ್ ಅವರಿಗೆ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ತಿಳಿಸಿದ್ದಾರೆ.