ಮಡಿಕೇರಿ, ಸೆ. ೧೦: ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಿಸಿದ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಸೇರಿ ೧೫ ಜಿಲ್ಲೆಗಳ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕರ್ನಾಟಕ ಉಪಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ದಿನಪತ್ರಿಕೆಗಳಲ್ಲಿ ವರದಿಯಾದಂತೆ ಈ ವರ್ಷದ ಶೂಗಳು ಒಂದು ವಾರದಲ್ಲೇ ಹರಿದು ಹೋಗುತ್ತಿವೆ, ಹೊಲಿಗೆ ಬಿಚ್ಚಿಕೊಳ್ಳುತ್ತಿವೆ. ಕಳೆದ ವರ್ಷಕ್ಕಿಂತ ಕಳಪೆಯಾಗಿದ್ದು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಬಗ್ಗೆ ಗಮನಿಸಿ ನ್ಯಾ. ಕೆ.ಎನ್. ಫಣೀಂದ್ರ ಅವರು ಈ ಆದೇಶ ಹೊರಡಿಸಿದ್ದಾರೆ. ಇದು ಸಂವಿಧಾನದ ೨೧ ಎ ವಿಧಿ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಪ್ರಕರಣ ಸಂಖ್ಯೆ: ಅomಠಿಣ/Uಠಿಟoಞ/ಒಙS/೫೭೩೧/೨೦೨೬, ಈ ಕುರಿತು ಲೋಕಾಯುಕ್ತ ಎಸ್‌ಪಿಗೆ ೨ ವಾರದಲ್ಲಿ ಪ್ರಾಥಮಿಕ ತನಿಖಾ ವರದಿ ಸಲ್ಲಿಸಲು ಸೂಚಿಸಲಾಗಿದೆ. ಆದೇಶದ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ.

ಕೆ.ಎಂ. ಇಸ್ಮಾಯಿಲ್ ಕಂಡಕರೆ