ಸೋಮವಾರಪೇಟೆ, ಸೆ. ೧೦: ರಾಜ್ಯ ಸರ್ಕಾರದ ನೂತನ ಸುತ್ತೋಲೆಯಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸಕಾಲದಲ್ಲಿ ಪರಿಹಾರ ನೀಡುವ ಸಲುವಾಗಿ ರಾಜ್ಯಾದ್ಯಂತ ಪ್ರತಿ ಜಿಲ್ಲೆ, ತಾಲೂಕು, ಹೋಬಳಿಗಳಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರದಂದು ನಡೆಸಲು ಉದ್ದೇಶಿಸಿರುವ ಪ್ರಜಾ ಸೇವೆ ಆಂದೋಲನ ತಾ. ೧೨ರಂದು ಕೊಡ್ಲಿಪೇಟೆಯಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ

ತಿಳಿಸಿದ್ದಾರೆ.

ತಾ. ೧೨ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಕೊಡ್ಲಿಪೇಟೆ ಹೋಬಳಿಯ ಪ್ರಜಾಸೇಸೆ ಸಭೆಯನ್ನು ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಶ್ರೀಕ್ಷೇತ್ರ ಕಿರಿಕೊಡ್ಲಿ ಮಠದ ಆವರಣದಲ್ಲಿರುವ ಶ್ರೀಮತಿ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ಅಂದು ನಡೆಯುವ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.