ವೀರಾಜಪೇಟೆ, ಸೆ. ೧೦: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ರೈತ ಹೋರಾಟ ಸಮಿತಿಯಿಂದ ತಾ. ೧೧ ರಂದು (ಇಂದು) ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಕೊಡವ ಸಮಾಜಗಳ ಒಕ್ಕೂಟ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ತಿಳಿಸಿದ್ದಾರೆ.
* ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನೆಲೆಯಲ್ಲಿ ಹೊರಡಿಸಿರುವ ೭ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ತಾ.೧೧ರಂದು (ಇಂದು)ಮಡಿಕೇರಿ ಗಾಂಧಿ ಮೈದಾನದಲ್ಲಿ ರೈತ ಹೋರಾಟ ಸಮಿತಿ, ರೈತ ಸಂಘ, ಕಾಫಿ ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಯೋಜಿಸಿರುವ ರೈತರ ಪ್ರತಿಭಟನೆಗೆ ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.