ಕೂಡಿಗೆ, ಸೆ. ೧೦: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯಿಂದ ಗುರುವಾರ ಮಧ್ಯಾಹ್ನದಿಂದ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ೩ ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ರಾಜ್ಯ ಸರ್ಕಾರದ ಸೂಚನೆಯಂತೆ ಕಾವೇರಿ ನೀರಾವರಿ ನಿಗಮದ ಆದೇಶದ ಅನ್ವಯ ಹಾರಂಗಿ ನೀರಾವರಿ ಇಲಾಖೆಯ ವತಿಯಿಂದ ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರನ್ನು ಹರಿಸಲಾಗುತ್ತಿದೆ.
ರೈತರ ಆಕ್ರೋಶ
ಹಾರಂಗಿ ಅಣೆಕಟ್ಟೆಯಿಂದ ಈಗಾಗಲೇ ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಕಟ್ಟು ಪದ್ಧತಿ ವ್ಯವಸ್ಥೆಯಡಿಯಲ್ಲಿ ಮುಖ್ಯ ನಾಲೆ ಮತ್ತು ಬಲದಂಡೆ, ಎಡದಂಡೆಯ ನಾಲೆಗಳ ಮೂಲಕ ಕೆರೆ ಕಟ್ಟೆಗಳನ್ನು ತುಂಬಿಸಲು ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಜಾನುವಾರುಗಳಿಗೆ ಕುಡಿಯುವ ನೀರನ್ನು ಒದಗಿಸುವ ವ್ಯವಸ್ಥೆಗೆ ನೀರನ್ನು ಹರಿಸಲಾಗುತ್ತಿದೆ. ಇದೀಗ ಅಣೆಕಟ್ಟೆಯಲ್ಲಿ ಸಂಗ್ರಹವಾದ ನೀರನ್ನು ನದಿಗೆ ಹರಿಸಿ ಜಿಲ್ಲೆಯ ಅಚ್ಚುಕಟ್ಟು ಪ್ರದೇಶ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦ ಉಪಗ್ರಾಮಗಳ ರೈತರು ಮತ್ತು ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರ ಸಂಘದ ಅಧ್ಯಕ್ಷರು, ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಸಂಬAಧಿಸಿದAತೆ ನೀರಾವರಿ ಇಲಾಖೆಯ ಅಧಿಕಾರಿಗಳ ಪ್ರತಿಕ್ರಿಯೆ ಬಯಸಿದಾಗ ಸರಕಾರದ ಸೂಚನೆಯಂತೆ ನೀರು ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. - ಕೆ.ಕೆ. ನಾಗರಾಜಶೆಟ್ಟಿ