ಮಡಿಕೆÃರಿ, ಸೆ. ೧೧: ಗೋಣಿಕೊಪ್ಪಲು ಲಯನ್ಸ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಡಿಕೇರಿಯ ಎಫ್.ಎಂ.ಸಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿ, ಸಮಾಜಕ್ಕೆ ಸತ್ಪçಜೆಗಳನ್ನು ಕೊಡುಗೆಯಾಗಿ ನೀಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಮುತ್ತಣ್ಣ ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಕರುಂಬಯ್ಯ, ಖಜಾಂಚಿ ಎ.ಬಿ. ಮಾದಪ್ಪ, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಧನು ಉತ್ತಯ್ಯ, ಕಾರ್ಯದರ್ಶಿ ಡಾ. ಸೂರಜ್ ಉತ್ತಪ್ಪ ಹಾಗೂ ಹಿರಿಯ ಶಾಲಾ ಸಿಬ್ಬಂದಿ ಕಂಜಿತAಡ ಕುಶಾಲಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭ ಲಯನ್ಸ್ ಸಂಸ್ಥೆಯ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಲಿಯೋ ಕ್ಲಬ್ ಸದಸ್ಯರ ವತಿಯಿಂದ ಶಿಕ್ಷಕರಿಗಾಗಿ ವಿವಿಧ ಕ್ರೀಡಾ ಮತ್ತು ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಿ.ಎ. ಕಾವೇರಿ ಸ್ವಾಗತಿಸಿ, ದೇಷ್ನ ಉಪೇಂದ್ರ ಕಾರ್ಯಕ್ರಮ ನಿರೂಪಿಸಿದರು. ಸಿಂಚನ ವಂದಿಸಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು