ಮಡಿಕೇರಿ, ಸೆ. ೧೧: ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾದ್ಯಂತ ಧ್ವನಿವರ್ಧಕಗಳಲ್ಲಿ ‘ಪ್ರೆಶರ್ ಮಿಡ್’ ಅಳವಡಿಸುವುದು ಹಾಗೂ ‘ಪ್ರೆಶರ್ ಮಿಡ್’ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಆದೇಶದಂತೆ ತಾ. ೧೪ರಿಂದ ಅಕ್ಟೋಬರ್ ೩೧ರವರೆಗೆ ಕೊಡಗು ಜಿಲ್ಲೆಯಾದ್ಯಂತ ಧ್ವನಿವರ್ಧಕಗಳಲ್ಲಿ ‘ಪ್ರೆಶರ್ ಮಿಡ್’ ಅಳವಡಿಸುವುದು ಹಾಗೂ ಅಂತಹ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶರಾಗಿ ಕೆ.ಎಸ್. ಭರತ್ ಕುಮಾರ್
ಮಡಿಕೇರಿ, ಸೆ. ೧೧: ಮೂಲತಃ ವಿರಾಜಪೇಟೆಯ ಕೆ.ಎಸ್. ಭರತ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಒಪ್ಪಿಗೆ ನೀಡಿದೆ.
೨೦೨೩ ರಿಂದ ಕರ್ನಾಟಕ ಹೈಕೋರ್ಟ್ನ ರಿಜಿಸ್ಟಾçರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಭರತ್ ಕುಮಾರ್ ಅವರು ಸದ್ಯದಲ್ಲೇ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇವರು ಹಿಂದಿನ ಕೊಡಗು ಜಿಲ್ಲಾ ಪರಿಷತ್‌ನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕೆ.ಬಿ. ಶಾಂತಪ್ಪ ಅವರ ಪುತ್ರ.