ಸೋಮವಾರಪೇಟೆ,ಸೆ.೧೧: ಅಪ್ರಾಪ್ತೆ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ ಅಂಗಡಿಯೊAದರಲ್ಲಿ ಕೆಲಸ ಮಾಡಿಕೊಂಡಿರುವ ಮೋಹನ್ಕುಮಾರ್, ಅಪ್ರಾಪ್ತೆ ಶಾಲಾ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದು, ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆ ಮೊಕದ್ದಮೆ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಮೇರೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಆರೋಪಿ ಮೋಹನ್ಕುಮಾರ್ ಅಪ್ರಾಪ್ತೆ ಬಾಲಕಿಗೆ ಮೊಬೈಲ್ ಖರೀದಿಸಿಕೊಟ್ಟಿದ್ದು, ಕಳೆದ ಸೆ. ೩೦ ರಂದು ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ಪಟ್ಟಣಕ್ಕೆ ಆಗಮಿಸಿದ ಬಾಲಕಿಯನ್ನು ತನ್ನ ಕಾರಿನಲ್ಲಿ ರೇಂಜರ್ ಬ್ಲಾಕ್ನಲ್ಲಿರುವ ಮನೆಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಯ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಡವಾಗಿ ಮಾಹಿತಿ ನೀಡಿದ್ದು, ನಿನ್ನೆ ದಿನ ಸೋಮವಾರಪೇಟೆ ಪೊಲೀಸ್ ಠಾಣೆಗೆ ಆಗಮಿಸಿದ ಪೋಷಕರು ಆರೋಪಿ ಮೋಹನ್ಕುಮಾರ್ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸ್ ಠಾಣಾಧಿಕಾರಿ ಖತೀಜಾ ಅವರು, ತಕ್ಷಣ ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಡಿವೈಎಸ್ಪಿ ಚಂದ್ರಶೇಖರ್, ಪ್ರಭಾರ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣರಾಜ್ ಅವರುಗಳ ನಿರ್ದೇಶನದಂತೆ ಪೊಲೀಸ್ ಠಾಣಾಧಿಕಾರಿ ಖತೀಜಾ ಅವರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.