ಸುಂಟಿಕೊಪ್ಪ, ಸೆ. ೧೧: ಕಂಬಿಬಾಣೆಯ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ೪ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ತಾ. ೧೩ರಂದು ಭಾನುವಾರ ಕಂಬಿಬಾಣೆಯ ಅನ್ನಪೂರ್ಣೇಶ್ವರಿ ಹಾಲ್‌ನಲ್ಲಿ ನಡೆಯಲಿದೆ ಎಂದು ಮಂಡಳಿಯ ಅಧ್ಯಕ್ಷೆ ಅಕ್ಷತಾ ಯೋಗೇಶ್ ತಿಳಿಸಿದ್ದಾರೆ. ಬೆಳಿಗ್ಗೆ ೯ ಗಂಟೆಯಿAದ ಶ್ರೀಕೃಷ್ಣನ ವಿವಿಧ ಛದ್ಮವೇಷ ಸ್ಪರ್ಧೆ, ಮುದ್ದುರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಗೆ ಯಶೋಧೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಒಂದರಿAದ ೧೫ ವರ್ಷದೊಳಗಿನ ಮಕ್ಕಳಿಗೆ ವಿವಿಧ ಛದ್ಮವೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದೇ ಸಂದರ್ಭ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಲಿದೆ. ಅಪರಾಹ್ನ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಗಣ್ಯರು ಪಾಲ್ಗೊಂಡು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಿದ್ದಾರೆ.